ಮಡಿಕೇರಿ, ಜ. ೧೦: ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನ ಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆ ಯಾದ “ಯುವ ಸ್ಪಂದನ” ಯೋಜನೆ-ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಹಾಗೂ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನದಡಿಯಲ್ಲಿ ಕಚೇರಿ ಕೆಲಸಕ್ಕೆ ಯುವ ಸಮಾಲೋಚಕರು ಹಾಗೂ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆದ್ದರಿಂದ ೨೧ ರಿಂದ ೩೫ ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ, ಕನ್ನಡವನ್ನು ಬರೆಯುವ ಹಾಗೂ ಸ್ಪಷ್ಟವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂರ್ತವ್ಯಕ್ತಿತ್ವ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯವನ್ನು ಹೊಂದಿರುವ, ಕೊಡಗು ಜಿಲ್ಲೆಯಲ್ಲಿ ಪ್ರಯಾಣಿಸುವಂತಹ, ಸೇವಾ ಮನೋಭಾವ ಹೊಂದಿರುವ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳು ಮತ್ತು ಅಂಕಪಟ್ಟಿಗಳೊAದಿಗೆ ತಾ. ೧೭ ರಂದು ನೇರ ಸಂದರ್ಶನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಕ್ರೀಡಾಂಗಣ ಕೊಡಗು, ದೂರವಾಣಿ ಸಂಖ್ಯೆ ೦೮೨೭೨-೨೨೦೯೮೬ ಹಾಗೂ ೯೪೮೦೦೩೨೭೧೨ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ತಿಳಿಸಿದ್ದಾರೆ.