ಚೆಯ್ಯಂಡಾಣೆ, ಜ. ೧೦: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಾಪೋಕ್ಲು ವೀರಾಜಪೇಟೆ ಮುಖ್ಯರಸ್ತೆಯ ಕೈಕಾಡು ಗ್ರಾಮದ ರಸ್ತೆಯ ತಿರುವಿನಲ್ಲಿ ಮಂಗಳವಾರ ನಡೆದಿದೆ.

ಮಂಗಳವಾರ ಮಧ್ಯರಾತ್ರಿ ನಾಪೋಕ್ಲುವಿನ ನಾಲ್ವರು ಪ್ರಯಾಣಿಸುತ್ತಿದ್ದ ಹುಂಡೈ ಐ ೨೦ ಕಾರು ವೀರಾಜಪೇಟೆ ಕಡೆಯಿಂದ ನಾಪೋಕ್ಲುವಿಗೆ ಬರುತ್ತಿದ್ದಾಗ ವೀರಾಜಪೇಟೆ ನಾಪೋಕ್ಲು ಮುಖ್ಯರಸ್ತೆಯ ಕೈಕಾಡು ಗ್ರಾಮದ ಸೇತುವೆ ಬಳಿಯ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬಕ್ಕೂ ಹಾನಿಯಾಗಿದ್ದು, ಕಾರಿನ ಒಂದು ಭಾಗ ಜಖಂಗೊAಡಿದೆ. ಕಾರಿನಲ್ಲಿದ್ದ ೪ ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. -ಅಶ್ರಫ್