ಶ್ರೀಮಂಗಲ, ಜ. ೧೦: ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕರ ನಿಧಿಯಿಂದ ರೂ. ೧೦ ಲಕ್ಷ ಅನುದಾನದಲ್ಲಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಶಾಸಕರು, ಪರಿಶಿಷ್ಟ ಜಾತಿ, ಪಂಗಡ, ಬುಡಕಟ್ಟು ಜನರು ವಾಸವಾಗಿರುವ ಈ ಪ್ರದೇಶದಲ್ಲಿ ಬಹಳಷ್ಟು ವರ್ಷಗಳಿಂದ ರಸ್ತೆ ನಿರ್ಮಾಣದ ಬೇಡಿಕೆ ಈಡೇರಿರಲಿಲ್ಲ. ಇದನ್ನು ಪರಿಗಣಿಸಿ ಸ್ಥಳೀಯ ಜನರಿಗೆ ಅನುಕೂಲವಾಗು ವಂತೆ ಗುಣಮಟ್ಟದ ರಸ್ತೆ ನಿರ್ಮಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಪಿ.ಸಿ. ಸುಬ್ಬ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹಾಗೂ ಬಿಪಿಎಲ್ ಕುಟುಂಬಗಳಿಗೆ ಸರ್ಕಾರದಿಂದ ಮನೆ ನಿರ್ಮಾಣಕ್ಕೆ ಇರುವ ರೂ. ೧.೨೦ ಲಕ್ಷ ಅನುದಾನವನ್ನು ಹೆಚ್ಚಿಸಬೇಕೆಂದು ಶಾಸಕರಿಗೆ ಬೇಡಿಕೆ ಸಲ್ಲಿಸಿದರು. ಇದನ್ನು ಮುಖ್ಯಮಂತ್ರಿಗಳೊAದಿಗೆ ಸಮಾಲೋಚಿಸಿ ಹೆಚ್ಚಿನ ಅನುದಾನ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳ ಲಾಗುವುದು ಎಂದು ಶಾಸಕರು ಹೇಳಿದರು.
ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮುಕ್ಕಾಟೀರ ಶಿವು ಮಾದಪ್ಪ ಮಾತನಾಡಿ, ಕುಟ್ಟದಿಂದ ೨ ಕಿ.ಮೀ. ಅಂತರದಲ್ಲಿರುವ ಕೇರಳ ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆ ರೂ. ೩.೪೦ ಲಕ್ಷ ಹಾಗೂ ಇನ್ನೊಂದು ಯೋಜನೆ ಯಲ್ಲಿ ರೂ. ೬ ಲಕ್ಷಗಳನ್ನು ಮನೆ ನಿರ್ಮಾಣಕ್ಕಾಗಿ ಸರ್ಕಾರ ನೀಡುತ್ತಿದೆ. ಆದರೆ ನಮ್ಮ ರಾಜ್ಯ ಬಡವರ ಮನೆ ನಿರ್ಮಾಣಕ್ಕೆ ಕೇವಲ ರೂ. ೧.೨೦ ಲಕ್ಷ ನೀಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸ ಬೇಕಾಗಿದೆ ಎಂದು ಕೋರಿದರು.
ವಲಯ ಕಾಂಗ್ರೆಸ್ ಅಧ್ಯಕ್ಷ ಹೆಚ್.ವೈ. ರಾಮಕೃಷ್ಣ ಮಾತನಾಡಿ, ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೧.೨೦ ಲಕ್ಷದ ಮನೆ ನಿರ್ಮಾಣದ ಯೋಜನೆಗೆ ಫಲಾನುಭವಿಗಳು ಮುಂದು ಬರುತ್ತಿಲ್ಲ. ಏಕೆಂದರೆ ಈ ಅನುದಾನದಲ್ಲಿ ಮನೆ ನಿರ್ಮಾಣ ಸಾಧ್ಯವಿಲ್ಲ. ಆದ್ದರಿಂದ ಸುಮಾರು ೩೦ ಮನೆ ನಿರ್ಮಾಣಕ್ಕೆ ಬಂದಿರುವ ಯೋಜನೆ ಹಾಗೆಯೇ ಉಳಿದಿದೆ. ಹತ್ತು ವರ್ಷಗಳ ಹಿಂದೆ ಕುಟ್ಟ ಸಿಂಕೋನ ಕಾಲೋನಿ ಸಮೀಪ ಸಮುದಾಯ ಭವನ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದ್ದು ಇದನ್ನು ಅನುದಾನ ನೀಡಿ ಪೂರ್ಣಗೊಳಿ ಸಿದರೆ ಸ್ಥಳೀಯರಿಗೆ ಸಣ್ಣಪುಟ್ಟ ಕಾರ್ಯಕ್ರಮ ನಡೆಸಲು ಸಭಾಂಗಣ ದೊರೆಯುತ್ತದೆ ಎಂದು ಶಾಸಕರಿಗೆ ಮನವಿ ಮಾಡಿದರು.
ಇವೆಲ್ಲ ಬೇಡಿಕೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಅನುದಾನ ಒದಗಿಸಿ ಸ್ಪಂದಿಸುವ ಭರವಸೆಯನ್ನು ಶಾಸಕರು ನೀಡಿದರಲ್ಲದೆ ರಸ್ತೆಯ ಗುಣಮಟ್ಟ ಪರಿಶೀಲಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಮುಕ್ಕಾಟಿರ ನವೀನ್ ಅಯ್ಯಪ್ಪ, ತಾ.ಪಂ. ಮಾಜಿ ಸದಸ್ಯ ಪಲ್ವಿನ್ ಪೂಣಚ್ಚ, ಮುಕ್ಕಾಟಿರ ಸಂದೀಪ್, ಕುಪ್ಪಣಮಾಡ ಪ್ರೀತಮ್, ಗ್ರಾ.ಪಂ. ಸದಸ್ಯರಾದ ಪಿ.ಸಿ. ಸುಬ್ಬ, ರುಮ್ಲಾ, ಬಿ.ಕೆ. ಪ್ರೇಮ, ವಿ.ಕೆ. ಗೋಪಾಲ ಕೃಷ್ಣ, ಸುರೇಶ್ ಮತ್ತಿತರರು ಹಾಜರಿದ್ದರು.