ಕೂಡಿಗೆ, ಜ. ೧೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಸಿಕ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಹಾರಂಗಿಯ ಕುಶಾಲನಗರ ರಸ್ತೆಯ ಸುಂದರನಗರ ಗ್ರಾಮದ ಜಿಲ್ಲೆಯ ಪ್ರಮುಖ ಕೈಗಾರಿಕಾ ಘಟಕದ ಮುಖ್ಯ ದ್ವಾರಕ್ಕೆ ಹೊಂದಿಕೊAಡಿರುವ ವೃತ್ತಕ್ಕೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಹೆಸರು ಇಡುವ ಬಗ್ಗೆ ಗ್ರಾಮಸ್ಥರಿಂದ ಬಂದ ಅರ್ಜಿ ಚರ್ಚೆ ನಡೆದು ವೃತ್ತಕ್ಕೆ ದಿ. ಗುಂಡೂರಾವ್ ಹೆಸರನ್ನು ನಾಮಕರಣ ಮಾಡಲು ಒಕ್ಕೊರಲಿನಿಂದ ಸಭೆ ಅಂಗೀಕರಿಸಿತು.
ಸಭೆಯಲ್ಲಿ ಸರ್ವೆ ನಂಬರ್ ೨೩/೧ ರ ಜಾಗದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಕಟ್ಟಡಗಳ ನಿರ್ಮಾಣಕ್ಕೆ ಅನುಕೂಲವಾಗುವಂತೆ ಸ್ಥಳ ಗುರುತಿಸುವಿಕೆ ಸೇರಿದಂತೆ ಎಲ್ಲಾ ವಾರ್ಡ್ಗಳ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆದವು.
ಅಧ್ಯಕ್ಷತೆಯನ್ನು ವಹಿಸಿದ್ದ ಭಾಸ್ಕರ್ ನಾಯಕ್ ಮಾತನಾಡಿ, ಆದ್ಯ ಎಲ್ಲಾ ವಾರ್ಡ್ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಅನುದಾನವನ್ನು ಕಾಯ್ದಿರಿಸಿ ಪ್ರಗತಿಪರ ಕಾಮಗಾರಿಗಳನ್ನು ಕೈಗೊಳ್ಳಲು ಸದಸ್ಯರುಗಳ ಸಹಕಾರ ಬಹುಮುಖ್ಯ. ಅದರನ್ವಯ ಕಾರ್ಯೋನ್ಮುಖರಾಗಿ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಿದ್ಧರಾಗಿದ್ದೇವೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸಂತೋಷ್, ಕರ ವಸೂಲಿಗಾರ ಅವಿನಾಶ್ ಹಾಜರಿದ್ದರು.