ಮುಳ್ಳೂರು, ಜ. ೧೧: ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಆಯುಷ್ಮಾನ್ ಭವ ಯೋಜನೆ ಮೂಲಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದೆ ಎಂದು ಜಿಲ್ಲಾ ಶಸ್ತç ಚಿಕಿತ್ಸಾಧಿಕಾರಿ ಡಾ. ನಂಜುAಡಯ್ಯ ಅಭಿಪ್ರಾಯಪಟ್ಟರು.

ಅವರು ಸಮೀಪದ ಕೊಡ್ಲಿಪೇಟೆ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕರ ಆಸ್ಪತ್ರೆ, ವೈದ್ಯಕೀಯ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡ್ಲಿಪೇಟೆ, ಬ್ಯಾಡಗೊಟ್ಟ ಮತ್ತು ಬೆಸೂರು ಗ್ರಾ.ಪಂ.ಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಆಯುಷ್ಮಾನ್‌ಭವ ಉಚಿತ ಆರೋಗ್ಯ ತಪಾಸಣೆ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಹಿತದೃಷ್ಟಿಯಿಂದ ಆಯುಷ್ಮಾನ್‌ಭವ ಯೋಜನೆ ಮೂಲಕ ಆಯಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಶಿಬಿರದಲ್ಲಿ ವಿವಿಧ ಕಾಯಿಲೆಗಳಿಗೆ ಸಂಬAಧಪಟ್ಟAತೆ ತಜ್ಞ ವೈದ್ಯರು ಖಾಯಿಲೆಗಳ ಕುರಿತಾಗಿ ತಪಾಸಣೆ ಮಾಡುತ್ತಾರೆ. ಆರೋಗ್ಯ ಶಿಬಿರದ ಯಶಸ್ವಿಗೆ ಇಲಾಖೆಗೆ ಸಂಬAಧಪಟ್ಟ ಗ್ರಾ.ಪಂ.ಯ ಮುಖ್ಯಸ್ಥರು, ಸದಸ್ಯರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ಬ್ಯಾಡಗೊಟ್ಟ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್ ಮಾತನಾಡಿ, ಕೊಡ್ಲಿಪೇಟೆ ಆಸ್ಪತ್ರೆಯಲ್ಲಿ ಆ್ಯಂಬ್ಯುಲೆನ್ಸ್ ವಾಹನದ ವ್ಯವಸ್ಥೆ ಇಲ್ಲದಿರುವುದರಿಂದ ಈ ಭಾಗದ ಜನರಿಗೆ ಸಮಸ್ಯೆಯಾಗುತ್ತಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಖಾಯಂ ಆ್ಯಂಬ್ಯುಲೆನ್ಸ್ ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಗೀತಾ ತ್ಯಾಗರಾಜ್, ಬೆಸೂರು ಗ್ರಾ.ಪಂ. ಅಧ್ಯಕ್ಷೆ ಕಮಲಮ್ಮ, ಬ್ಯಾಡಗೊಟ್ಟ ಗ್ರಾ.ಪಂ. ಸದಸ್ಯೆ ಪಾವನ, ಆಯುಷ್ಮಾನ್‌ಭವ ಇಲಾಖೆ ಅಧಿಕಾರಿ ರಾಮಚಂದ್ರ ಕಾಮತ್, ಡಾ.ಲೋಕೇಶ್, ಕೊಡ್ಲಿಪೇಟೆ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಧನಿಕಾ, ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೆ. ಮಂಜುಳ, ಹಿರಿಯ ಆರೋಗ್ಯ ಸಹಾಯಕಿ ಕೆ.ಕೆ. ಸರಸ್ವತಿ, ಆರೋಗ್ಯ ಇಲಾಖೆಯ ಕೆ.ಪಿ. ಮಹೇಶ್, ಆರೋಗ್ಯ ಇಲಾಖೆ ಮೇಲ್ವಿಚಾರಕಿ ವನಿತ, ಆಸ್ಪತ್ರೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ವಿವಿಧ ಕಾಯಿಲೆಗಳಿಗೆ ಸಂಬAಧಪಟ್ಟAತೆ ಹತ್ತು ಮಂದಿ ತಜ್ಞ ವೈದ್ಯರು ರೋಗಿಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.