ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜ. ೧೧: ಕೋವಿಡ್-೧೯ ಪ್ರಕರಣಗಳು ವರದಿ ಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ನೇತೃತ್ವದಲ್ಲಿ ವೀಡಿಯೋ ಸಂವಾದ ಮೂಲಕ ಅಧಿಕಾರಿಗಳ ಜೊತೆ ಬುಧವಾರ ಸಭೆ ನಡೆಯಿತು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಕೋವಿಡ್-೧೯ ನಿಯಂತ್ರಣ ಸಂಬAಧ ಅಗತ್ಯ ಮುನ್ನೆಚ್ಚರ ವಹಿಸುವಲ್ಲಿ ೧೫ ದಿನಗಳಿಗೊಮ್ಮೆ ವೀಡಿಯೋ ಸಂವಾದ ಮೂಲಕ ಸಭೆ ಏರ್ಪಡಿಸುವಂತೆ ಸಲಹೆ ಮಾಡಿದರು.

ಕೋವಿಡ್ ನಿಯಂತ್ರಣ ಸಂಬAಧಿಸಿದAತೆ ಸರ್ಕಾರವು ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಗಡಿಭಾಗಕ್ಕೆ ಹೊಂದಿಕೊAಡಿರುವ ಗ್ರಾಮಗಳಲ್ಲಿ ಅಗತ್ಯ ಪರೀಕ್ಷೆ ನಡೆಸಿ ವರದಿ ಸಲ್ಲಿಸುವುದು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧೋಪಚಾರಗಳನ್ನು ದಾಸ್ತಾನು ಮಾಡಿಕೊಳ್ಳುವುದು ಸೇರಿದಂತೆ ಕೋವಿಡ್ ನಿಯಂತ್ರಣ ಸಂಬAಧಿಸಿದAತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಕೋವಿಡ್ ನಿಯಂತ್ರಣ ಸಂಬAಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ, ಸಮುದಾಯ ಮತ್ತು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿ.ಪಂ. ಸಿಇಓ ವರ್ಣಿತ್ ನೇಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.

ಕೋವಿಡ್-೧೯ ಸಂಬAಧ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿರುವ ವಿವರ ಇಂತಿದೆ

ಎಲ್ಲಾ ಹಿರಿಯ ನಾಗರಿಕರು ೬೦ ವರ್ಷ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ವಿಶೇಷವಾಗಿ ಹೃದಯ, ಲಿವರ್ ಸಮಸ್ಯೆ, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ, ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳಬಾರದು.

ಜ್ವರ, ಕೆಮ್ಮು, ನೆಗಡಿ ಉಸಿರಾಟದ ಸೋಂಕಿನ ಲಕ್ಷಣ ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆಯಬೇಕು. ಇತರ ವ್ಯಕ್ತಿಗಳೊಂದಿಗೆ ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡುವುದು. ಆರೋಗ್ಯ ಸಮಸ್ಯೆ ಹೊಂದಿದವರು ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದಲ್ಲಿ ಮಾಸ್ಕ್ ಧರಿಸಬೇಕು.

ಅಂರ‍್ರಾಷ್ಟಿçÃಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸುವುದು, ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದು ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.

ನಿಗದಿತ ಗುರಿಯಂತೆ ಕೋವಿಡ್-೧೯ ಪ್ರಕರಣಗಳ ಪರೀಕ್ಷೆ ನಡೆಸುವುದು, ಕೋವಿಡ್-೧೯ ಪರೀಕ್ಷೆಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಪ್ರಕರಣಗಳಿಗೆ ಕೋವಿಡ್-೧೯ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಎಲ್ಲಾ ಐಎಲ್‌ಐ/ ಎಸ್‌ಎಆರ್‌ಐ ಪ್ರಕರಣಗಳಿಗೆ ಕೋವಿಡ್-೧೯ ಪರೀಕ್ಷೆ ಮಾಡುವುದು ಕಡ್ಡಾಯವಾಗಿದೆ. ಸೋಂಕಿನ ಲಕ್ಷಣ ಹೊಂದಿದವರಿಗೆ ಹಾಗೂ ಖಚಿತ ಪ್ರಕರಣಗಳ ಸಂಪರ್ಕಿತರು ಕೋವಿಡ್ -೧೯ ಪರೀಕ್ಷೆಗೆ ಒಳಪಡುವುದನ್ನು ಖಚಿತಪಡಿಸಿಕೊಳ್ಳಬೇಕು.

ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಲು ಅಗತ್ಯ ಸಂಖ್ಯೆಯ ತಂಡಗಳನ್ನು ಜಿಲ್ಲೆ ಮತ್ತು ತಾಲೂಕು ಗಳಲ್ಲಿ ಕಾರ್ಯೋನ್ಮುಖಗೊಳಿಸುವುದು, ಎಲ್ಲಾ ಕೋವಿಡ್-೧೯ ಪಾಸಿಟೀವ್ ಫಲಿತಾಂಶ ಬಂದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗೆ ಕಡ್ಡಾಯವಾಗಿ ಕಳುಹಿಸಬೇಕು. ಪಟ್ಟಣ ಹಾಗೂ ಗ್ರಾಮಗಳಲ್ಲಿ ವರದಿಯಾಗುವ ಜ್ವರ ಪ್ರಕರಣಗಳ ವರದಿಯ ಬಗ್ಗೆ ದೈನಂದಿನ ಪರಿಶೀಲನೆ ನಡೆಸುವುದು.

ಜ್ವರ ಪ್ರಕರಣಗಳ ಕುರಿತು ದೈನಂದಿನ ಸಮೀಕ್ಷೆ ಹಾಗೂ ಏರಿಕೆ ಕಂಡು ಬಂದಲ್ಲಿ ಸ್ಥಳೀಯವಾಗಿ ನಿಯಂತ್ರಣ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವುದು. ಗಡಿ ಭಾಗಗಳಲ್ಲಿನ ಸ್ಥಳೀಯ ಸಂಸ್ಥೆಗಳ ಜೊತೆ (ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) ಮುಖ್ಯಸ್ಥರೊಂದಿಗೆ ಸಂಬAಧಪಟ್ಟ ತಾಲೂಕು ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಕೋವಿಡ್-೧೯ ಜೆಎನ್.೧ ತಳಿಯ ವೈರಸ್ ನಿಯಂತ್ರಣದಲ್ಲಿ ಇವರ ಪಾತ್ರ ಹಾಗೂ ಸಹಕಾರದ ಕುರಿತು ಮನವರಿಕೆ ಮಾಡಿಕೊಡುವುದು.