ಮಡಿಕೇರಿ, ಜ. ೧೧: ಜನವರಿ ತಿಂಗಳಲ್ಲಿ ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಮತ್ತು ಮಡಿವಾಳ ಮಾಚಿದೇವ ಜಯಂತ್ಯುತ್ಸವ ಆಚರಣೆ ಸಂಬAಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಾ. ೧೫ ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ನಿಗದಿಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸಭೆಯ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಮಾತನಾಡಿದ ಭೋವಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಸುಜೀತ್, ತಾ. ೧೫ ರಂದು ಮಕರ ಸಂಕ್ರಾAತಿ ಹಬ್ಬ ಇರುವುದರಿಂದ ತಾ. ೨೨ ರಂದು ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಕೋರಿದರು.

ತಾ. ೨೧ ರಂದು ಅಂಬಿಗರ ಚೌಡಯ್ಯ ಜಯಂತಿ ನಿಗದಿಯಾಗಿದ್ದು, ತಾ. ೨೧ ರ ಬದಲಾಗಿ, ೨೨ ರಂದು ಕಾರ್ಯಕ್ರಮ ಆಯೋಜಿಸುವಂತೆ ಕಾವೇರಿ ಮೀನುಗಾರರ ಸಂಘದ ಮಾಜಿ ಅಧ್ಯಕ್ಷ ಇ.ಎಸ್. ಶ್ರೀನಿವಾಸ್ ಮನವಿ ಮಾಡಿದರು.

ಈ ಎರಡು ಕಾರ್ಯಕ್ರಮವನ್ನು ನಗರದ ಗಾಂಧಿ ಭವನದಲ್ಲಿ ತಾ. ೨೨ ರಂದು ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಮಡಿವಾಳ ಮಾಚಿದೇವ ಜಯಂತಿಯು ಫೆಬ್ರವರಿ ೧ರಂದು ನಿಗಧಿಯಾಗಿದ್ದು, ೧ ರ ಬದಲಾಗಿ ಫೆಬ್ರವರಿ ೨೫ ರಂದು ನಗರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ಆಯೋಜನೆಗೆ ಅವಕಾಶ ಮಾಡುವಂತೆ ಮಡಿವಾಳರ ಅಭಿವೃದ್ಧಿ ಸಂಘದ ಅಧ್ಯಕ್ಷ ಪಿ.ಜಿ. ಸುಕುಮಾರ್ ಕೋರಿದರು.

ಇದಕ್ಕೆ ಜಿಲ್ಲಾಧಿಕಾರಿ ಅವರು ಸಹಮತ ವ್ಯಕ್ತಪಡಿಸಿದರು. ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಜೊತೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದರು.

ಪ್ರಮುಖರಾದ ಕೆ.ಎಸ್.ಮಹೇಶ್, ವಿನಾಯಕ, ಎಂ.ಕೆ.ಸುಬ್ರಮಣಿ, ಪಿ.ಜಿ.ಮಂಜುನಾಥ, ಪಿ.ಜಿ.ಕಮಲ್, ಎಂ.ಬಿ.ವಿಷ್ಣು, ಚೇತನ್ ಇತರರು ಹಲವು ಮಾಹಿತಿ ನೀಡಿದರು.