ವೀರಾಜಪೇಟೆ, ಜ. ೧೧: ಮಾದಕ ವಸ್ತುಗಳ ಬಳಕೆಯಿಂದ ಯುವ ಸಮುದಾಯವನ್ನು ಉಳಿಸುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮಾದಕ ವಸ್ತುಗಳ ನಿಗ್ರಹ ಜಾಥಾವನ್ನು ಹಮ್ಮಿಕೊಂಡಿದೆ.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಮತ್ತು ವೀರಾಜಪೇಟೆ ತಾಲೂಕು ಪೊಲೀಸ್ ಅಧಿಕಾರಿಗಳ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ನಗರದಲ್ಲಿ ಮಾದಕ ವಸ್ತುಗಳ ನಿಗ್ರಹ ಜಾಥಾ ಮತ್ತು ಸಾಮಾಜಿಕ ಪಿಡುಗುಗಳ ಬಗ್ಗೆ ಬೃಹತ್ ಜಾಥಾವನ್ನು ತಾ. ೧೩ ರಂದು ಬೆಳಿಗ್ಗೆ ೮ ಗಂಟೆಗೆ ತಾಲೂಕು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಾಥಾವು ತಾಲೂಕು ಮೈದಾನದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಾಲೂಕು ಮೈದಾನದಲ್ಲಿ ಕೊನೆಯಾಗಲಿದೆ. ಸಭಾ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮತ್ತು ವೀರಾಜಪೇಟೆ ತಾಲೂಕು ಪೊಲೀಸ್ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.