ಮಡಿಕೇರಿ, ಜ. ೧೧: ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಚೇತನ ಚಿಲುಮೆ ಇವರ ವತಿಯಿಂದ ಮಕ್ಕಳ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮವು ತಾ.೧೨ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿ ಕೊಹಿನೂರು ರಸ್ತೆ ಬಳಿ ನಡೆಯಲಿದೆ.
ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ. ಅನಂತಶಯನ, ಶಿಶು ಕಲ್ಯಾಣ ಸಂಸ್ಥೆ ಅಧ್ಯಕ್ಷ ಕೆ.ಪ್ರಕಾಶ್, ಕಾರ್ಯಾಧ್ಯಕ್ಷ ಬಿ.ಕೆ.ರವೀಂದ್ರ ರೈ, ಪ್ರಧಾನ ಕಾರ್ಯದರ್ಶಿ ನಮಿತಾ ರೈ, ಇತರರು ಪಾಲ್ಗೊಳ್ಳಲಿದ್ದಾರೆ.