ಮಡಿಕೇರಿ, ಜ. ೧೧: ಜಿಲ್ಲೆಯ ಕಾಫಿ, ಕರಿಮೆಣಸು ವ್ಯಾಪಾರಿಗಳು ಕಾಫಿ ಮತ್ತು ಮೆಣಸು ಖರೀದಿ ಮಾಡುವ ಸಂದರ್ಭ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಬೇಕು. ತಪ್ಪಿದಲ್ಲಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿನ ವ್ಯಾಪಾರಸ್ಥರು ಕಾಫಿ ಮತ್ತು ಕರಿಮೆಣಸು ಮಾರಾಟ ಮಾಡುವವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಖರೀದಿಸುವಾಗ ಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರ ತೆಗೆದುಕೊಳ್ಳಬೇಕು. ಮಾರಾಟಗಾರರ ಹಿನ್ನೆಲೆಯನ್ನು ಪರಿಶೀಲಿಸಿ ಎಚ್ಚರಿಕೆಯಿಂದ ವ್ಯವಹರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳು ಪರಿಶೀಲನೆ ಮಾಡುವ ಸಂದರ್ಭ ಕಾಫಿ ಮತ್ತು ಕರಿಮೆಣಸು ವ್ಯಾಪಾರಸ್ಥರು ಖರೀದಿದಾರರ ವಿವರವನ್ನು ಸಂಗ್ರಹಿಸದೇ ಇರುವುದು ಕಂಡುಬAದಲ್ಲಿ ಅಂತಹ ವ್ಯಾಪಾರಸ್ಥರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ನ್ಯಾಯಾಲಯ ೩ ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಸಾಧ್ಯತೆಗಳಿರುತ್ತದೆ ಎಂದು ತಿಳಿಸಿದ್ದಾರೆ.
(ಮೊದಲ ಪುಟದಿಂದ)
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾಫಿ ಮತ್ತು ಮೆಣಸು ಕೊಯ್ಲು ಮಾಡುವ ಸಮಯವಾಗಿದ್ದು, ಬೆಳೆಗಾರರು ಸಂಗ್ರಹಿಸಿಟ್ಟ ಬೆಳೆಯನ್ನು ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಮೆಣಸು ವ್ಯಾಪಾರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಕಾಫಿ ಮತ್ತು ಮೆಣಸು ವ್ಯಾಪಾರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವA ತೆಯೂ ತಿಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವ್ಯಾಪಾರ ನಡೆಸುವ ಸಂದರ್ಭ ಮಾರಾಟಗಾರರ ಕುರಿತು ಸಂಶಯ ಬಂದಲ್ಲಿ ತುರ್ತು ಸಹಾಯವಾಣಿ ೧೧೨ಕ್ಕೆ ಕರೆ ಮಾಡಿ ಮಾಹಿತಿ ಒದಗಿಸಿದರೆ ಸ್ಥಳಕ್ಕೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬAದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ ೧೧೨ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಕೆ.ಎಸ್.ಪಿ ತಂತ್ರಾAಶದ ಮೂಲಕವೂ ಮಾಹಿತಿ ನೀಡಿ ಸಹಕರಿಸುವಂತೆ ಎಸ್ಪಿ ಮನವಿ ಮಾಡಿದ್ದಾರೆ. ಅಕ್ರಮ ಚಟುವಟಿಕೆ ಗಳ ಕುರಿತು ಮಾಹಿತಿ ಒದಗಿಸು ವವರ ಹೆಸರು ಬಹಿರಂಗಪಡಿ ಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.