ಮುಳ್ಳೂರು, ಜ. ೧೧: ಹಂಡ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಗುಡುಗಳಲೆ ಜಯದೇವ ಜಾನುವಾರುಗಳ ಜಾತ್ರೆ ತಾ.೨೪ ರಿಂದ ಫೆ.೧೦ ರವರೆಗೆ ನಡೆಯಲಿದೆ ಎಂದು ಜಯದೇವ ಜಾನುವಾರು ಜಾತ್ರಾ ಸಮಿತಿ ಅಧ್ಯಕ್ಷ ಎಚ್.ಎಂ. ವಿನಯ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಂಡ್ಲಿ ಗ್ರಾ.ಪಂ. ಮತ್ತು ಗುಡುಗಳಲೆ ಜಯದೇವ ಜಾನುವಾರು ಜಾತ್ರಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದುಕೊಂಡು ಬರುತ್ತಿರುವ ಜಾನುವಾರುಗಳ ಜಾತ್ರೆಯು ತಾ.೨೪ ರಿಂದ ಫೆ.೧೦ ರವರೆಗೆ ನಡೆಯುತ್ತದೆ. ಈಗಾಗಲೇ ಜಾತ್ರಾ ಸಮಿತಿ ಸಿದ್ಧತೆ ನಡೆಸಿದೆ, ಜಾತ್ರೆಯ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ಜಾತ್ರಾ ಸಮಿತಿ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ಜಾನುವಾರು ಜಾತ್ರೆಗೆ ತಾ.೨೪ ರಂದು ಚಾಲನೆ ನೀಡಲಾಗುತ್ತದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ಶನಿವಾರಸಂತೆ ಬನ್ನಿ ಮಂಟಪದಿAದ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಹೊರಟು ಗುಡುಗಳಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇ಼ಷ ಪೂಜೆ ಸಲ್ಲಿಸಿದ ಬಳಿಕ ಗುಡುಗಳಲೆ ಜಾತ್ರಾ ಮೈದಾನವನ್ನು ಪ್ರವೇಶಿಸಲಾಗುತ್ತದೆ. ನಂತರ ಜಯದೇವ ಜಾತ್ರಾ ಮೈದಾನದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಗುತ್ತದೆ ಎಂದರು. ಜಾತ್ರೆಯನ್ನು ಶನಿವಾರಸಂತೆ, ದುಂಡಳ್ಳಿ, ನಿಡ್ತ ಗ್ರಾ.ಪಂ.ಗಳ ಸಹಕಾರದಿಂದ ನಡೆಸಲಾಗುತ್ತದೆ ಎಂದರು.

ಗೋಷ್ಠಿಯಲ್ಲಿ ಜಾತ್ರಾ ಸಮಿತಿ ಸಹ ಕಾರ್ಯದರ್ಶಿ ಚೈತ್ರಾ, ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಸುಧಾ ಹಿರೇಶ್, ಸದಸ್ಯ ಬಸವರಾಜು, ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ರೂಪ ದಿನೇಶ್ ಹಾಜರಿದ್ದರು.