ಮಡಿಕೇರಿ, ಜ. ೧೧: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಮರ್ಪಣ್ ಮತ್ತು ವೀರಲೋಕ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ರೋಟರಿ ವುಡ್ಸ್ ಸಹಯೋಗದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯದ ಉನ್ನತೀಕರಣ ಸಮಾರಂಭವು ತಾ. ೧೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ.

ಬೆಂಗಳೂರು ವೀರಲೋಕ ಮುಖ್ಯಸ್ಥ ವೀರಕಪುತ್ರ ಶ್ರೀನಿವಾಸ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ಅಧಿಕಾರಿ ಎಲ್.ವೈ.ರಾಜೇಶ್, ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್, ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಬೆಂಗಳೂರು ಸಮರ್ಪಣ್ ಟ್ರಸ್ಟ್ನ ಮುಖ್ಯಸ್ಥ ಸಾಗರ್, ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಯ ಉಪಾಧ್ಯಕ್ಷ ಎ.ಪಿ. ಧನಂಜಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್.ವಿಜಯ, ಇತರರು ಪಾಲ್ಗೊಳ್ಳಲಿದ್ದಾರೆ.