ಮಡಿಕೇರಿ, ಜ. ೧೧: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) ೩೦೬೪ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ತಾ. ೨೮ರಂದು ಬೆಳಿಗ್ಗೆ ೧೧ರಿಂದ ೧೨.೩೦ ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು.
ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿ ನೀಡಲಾಗುವುದು. ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸ ಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದAದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ.