ಮಡಿಕೇರಿ, ಜ. ೧೧: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೧೨ ರಂದು (ಇಂದು) ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.