ವೀರಾಜಪೇಟೆ, ಜ. ೧೧: ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದಂತ ವೈದ್ಯಕೀಯ ಕಾಲೇಜಿನ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಬೆಳ್ಳಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಗುಣಮಟ್ಟದ ಶಿಕ್ಷಣ ಪಡೆದ ಪ್ರತಿಯೊಬ್ಬರು ಸಮಾಜ ಗುರುತಿಸುವಂತಹ ವ್ಯಕ್ತಿಯಾಗಿ ರೂಪುಗೊಳ್ಳುತ್ತಾರೆೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಪಾಠ ಪ್ರವಚನ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಇದರಿಂದ ಭವಿಷ್ಯ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ವಾಯು ಸೇನೆಯ ನಿವೃತ್ತ ಅಧಿಕಾರಿ ಮತ್ತು ಪ್ರೊಫೆಸರ್ ಡಾ. ಅನ್ಮೊಲ್ ಕಾಲ್ಹ ಮಾತನಾಡಿ, ವಿದ್ಯಾರ್ಥಿ ಸಂಘ ಎಂಬುದು ಕಾಲೇಜಿನ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೇ ಉತ್ತಮ ನಾಯಕತ್ವ ನಿರ್ಮಾಣಕ್ಕೆ ದಾರಿದೀಪವಾಗಬೇಕು ಎಂದರು.
ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಸುನೀಲ್ ಮುದ್ದಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊಡಗು ದಂತ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯಾಧುನಿಕ ದಂತ ವೈದ್ಯಕೀಯ ಉಪಕರಣಗಳು, ನುರಿತ ಉಪನ್ಯಾಸಕರು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಿದೆ ಎಂದರು.
ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧÀ್ಯಕ್ಷರಾಗಿ ಜಿಲ್ಲಾ ಎ.ಸಿ, ಪ್ರಧಾನ ಕಾರ್ಯದರ್ಶಿಯಾಗಿ ಸೂಸನ್ನಾ ಪರಕಟ್ಟು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪದವಿ ಲೋಕೇಶ್, ಕ್ರೀಡಾ ಕಾರ್ಯದರ್ಶಿಯಾಗಿ ಗೌತಮ್ ಟಿ. ಅಯ್ಕೆಗೊಂಡರು, ಏಂಜೆಲ್ ರೋಸ್ ಮ್ಯಾಥ್ಯೂ. ಎ.ಆರ್. ಗಾಯತ್ರಿ, ನವಜೋದ್ ಟಿ.ಪಿ. ಅನಶ್ವರ ಕೆ.ಎ. ಮತ್ತು ಸಂಯುಕ್ತ ಅವರುಗಳು ಸದಸ್ಯರಾಗಿ ಆಯ್ಕೆಗೊಂಡರು.
ವೇದಿಕೆಯಲ್ಲಿ ನೂತನವಾಗಿ ಆಯ್ಕೆಗೊಂಡ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಸಿ. ಪೊನ್ನಪ್ಪ ಪ್ರಮಾಣ ವಚನ ಭೋದಿಸಿದರು. ವಿವಿಧ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊAದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಡಾ. ಶ್ರಯನ ನಾಣಯ್ಯ ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿ ಸಂಘದ ಅಧÀ್ಯಕ್ಷ ಜಿಲ್ನಾ ವಂದಿಸಿದರು.