ಮಡಿಕೇರಿ, ಜ. ೧೨: ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ‘ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ತಾ. ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿನ್ನು ಹಾಗೂ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ ೮೦೫೦೭೭೦೦೦೫ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ ಠಿosಣmಚಿಣಡಿiಛಿಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂ. ೦೮೦-೩೫೨೫೪೭೫೭ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.