ಮಡಿಕೇರಿ, ಜ. ೧೨: ಮುಂದೆ ಬೇಸಿಗೆ ಎದುರಾಗುತ್ತಿದ್ದು ಕುಡಿಯುವ ನೀರಿನ ಪೂರೈಕೆಗೆ ಯಾವುದೇ ರೀತಿಯ ಸಮಸ್ಯೆಯಾಗಬಾರದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ .ಪೊನ್ನಣ್ಣ ತಿಳಿಸಿದ್ದಾರೆ.
ಪೊನ್ನಂಪೇಟೆ ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಬಾಕಿ ಇರುವ ಎಲ್ಲಾ ಕಾಮಗಾರಿಗಳು ತುರ್ತಾಗಿ ಪೂರ್ಣಗೊಳ್ಳಬೇಕು, ಯಾವುದೇ ಸಾರ್ವಜನಿಕ ದೂರುಗಳು ಬಾರದ ರೀತಿಯಲ್ಲಿ ಕ್ರಮವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯುತ್ ಇಲಾಖೆಯಿಂದ ಸಮರ್ಪವಾಗಿ ವಿದ್ಯುತ್ನ್ನು ಪೂರೈಸಿ ಎಎಒ ನೀರಿನ ಟ್ಯಾಂಕರ್ಗಳಿAದ ನೀರನ್ನು ಪಂಪ್ ಮಾಡಲು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಕ್ರಮ ವಹಿಸಲು ಸೆಸ್ಕ್ ಇಲಾಖೆಯ ಅಧಿಕಾರಿ ಗಳಿಗೆ ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇದ್ದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು. ಬೋರ್ವೆಲ್, ಮೋಟಾರ್ ಪಂಪ್, ವಿದ್ಯುತ್, ನೀರಿನ ಟ್ಯಾಂಕರ್ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ವೀರಾಜಪೇಟೆ ತಹಶೀಲ್ದಾರ್ ರಾಮಚಂದ್ರ, ಪ್ರವೀಣ್ ಕುಮಾರ್, ತಾ.ಪಂ. ಇ.ಓ.ಗಳಾದ ಕೆ.ಸಿ. ಅಪ್ಪಣ್ಣ, ಶೇಖರ್, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.