ಮಡಿಕೇರಿ, ಜ. ೧೨ : ಮಡಿಕೇರಿಯ ಮಂಗಳಾದೇವಿ ನಗರದಲ್ಲಿರುವ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ತಾ.೧೪ ಮತ್ತು ೧೫ ರಂದು ಶ್ರೀ ರಾಜರಾಜೇಶ್ವರಿ, ಮಹಾ ಗಣಪತಿ ಹಾಗೂ ನಾಗದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ.

ವಾರ್ಷಿಕೋತ್ಸವದ ಪ್ರಯುಕ್ತ ಎರಡು ದಿನಗಳ ಕಾಲ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿವೆ.

ಜ.೧೪ ರಂದು ಸಂಜೆ ೬ ಗಂಟೆಗೆ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೆÆÃಘ್ನ ಹೋಮ, ವಾಸ್ತು ಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.

ಜ.೧೫ ರಂದು ಬೆಳಿಗ್ಗೆ ೮ ಗಂಟೆಯಿAದ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ, ಕಳಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ೧೨ ಗಂಟೆಗೆ ಮಹಾಪೂಜೆ, ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಜರುಗಲಿದೆ.

ಸಂಜೆ ೫.೩೦ ರಿಂದ ಸಾಯಂಪೂಜೆ, ೬.೩೦ ಗಂಟೆಗೆ ರಂಗಪೂಜೆ, ೭ ಗಂಟೆಯಿAದ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠಪೂಜೆ, ಶುದ್ಧಿಕಲಶಾಭಿಷೇಕ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು. ದೇವಾಲಯದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದೆ.