ಮಡಿಕೇರಿ, ಜ. ೧೨: ಅಮ್ಮತ್ತಿ ಕೊಡವ ಸಮಾಜದ ವತಿಯಿಂದ ಪುತ್ತರಿ ಊರೊರ್ಮೆ ಕಾರ್ಯಕ್ರಮ ಇತ್ತೀಚೆಗೆ ವಿಜೃಂಭಣೆಯಿAದ ಜರುಗಿತು. ಸಮಾಜದ ಆಡಳಿತ ಮಂಡಳಿ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮತ್ತು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಚೀಫ್ ಎಲೆಕ್ಟಿçಕಲ್ ಇನ್ಸ್ಪೆಕ್ಟರ್ ತೀತಿರ ರೋಷನ್ ಅಪ್ಪಚ್ಚು ಅವರುಗಳು ಪಾಲ್ಗೊಂಡಿದ್ದರು.

ಜನಾAಗದ ಅಭಿವೃದ್ಧಿ ಹಾಗೂ ಭವಿಷ್ಯದ ಚಿಂತನೆಗಳ ಬಗ್ಗೆ ಅತಿಥಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಊರೊರ್ಮೆ ಅಂಗವಾಗಿ ವಿವಿಧ ಕಾರ್ಯಕ್ರಮಗಳೊಂದಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು.