ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ಜ. ೧೨: ಮಹತ್ವದ ತೀರ್ಪೊಂದರಲ್ಲಿ ರಾಜ್ಯ ಹೈ ಕೋರ್ಟ್ ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ( ನಗರ ಸ್ಥಳೀಯ ಸಂಸ್ಥೆಗಳು) ಇರುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಉದ್ಯಮಿ ಶ್ರೀಶೈಲ ಎಂಬುವರು ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ನಡೆಸುತಿದ್ದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆ ೧೯೬೪ರ ಸೆಕ್ಷನ್ ೯೫ ರಿಂದ ೯೭ಗಳ ಪ್ರಕಾರ ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಜಮೀನುಗಳು ಕೃಷಿಯೇತರ ಚಟುವಟಿಕೆಗಳಿಗೆ ಒಳಪಡಲಿದೆ ಎಂದು ಹೇಳಲಾಗಿದೆ. ಆದ ಕಾರಣ ಈ ವ್ಯಾಪ್ತಿಯ ಭೂಮಿಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಪೀಠ ತಿಳಿಸಿದೆ. ಅಲ್ಲದೇ, ಅರ್ಜಿದಾರರ ಭೂಮಿ ಪುರಸಭೆ ವ್ಯಾಪ್ತಿಯಲ್ಲಿದೆ. ಈ ಭೂಮಿಗೆ ಕರ್ನಾಟಕ ಭೂ ಕಂದಾಯ ಕಾಯಿದೆಯ ನಿಯಮಗಳು ಅನ್ವಯವಾಗುವುದಿಲ್ಲ ಎಂದು ಸಹ ಪೀಠ ತಿಳಿಸಿದೆ.

ಕೃಷಿಯೇತರ ಉದ್ದೇಶಕ್ಕಾಗಿ(ಪೆಟ್ರೋಲ್ ಬಂಕ್ ನಿರ್ಮಾಣಕ್ಕಾಗಿ) ಪರಿವರ್ತಿಸಲಾದ ಭೂಮಿಯು ಕೃಷಿಯೇತರ ವಾಣಿಜ್ಯ ಬಳಕೆಯ ನಡುವೆ ಯಾವುದೇ ವ್ಯತ್ಯಾಸವಿರುವುದಿಲ್ಲ. ಪೆಟ್ರೋಲ್ ಬಂಕ್ ನಿರ್ಮಾಣ ಮಾಡಲು ಈ ಹಿಂದೆಯೇ ಭೂಮಿಯನ್ನು ಪರಿವರ್ತಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ, ವಾಣಿಜ್ಯ ಕಟ್ಟಡ ಹಾಗೂ ಪೆಟ್ರೋಲ್ ಬಂಕ್ ನಿರ್ಮಾಣ ವಿಚಾರವಾಗಿ ಪರಿವರ್ತಿತ ಭೂಮಿಯನ್ನು ಪ್ರತ್ಯೇಕಿಸಿ ನೋಡುವುದಕ್ಕೆ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.

ಜತೆಗೆ, ಪ್ರಸ್ತುತ ಪರಿವರ್ತಿತ ಭೂಮಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿರುವುದರಿಂದ, ಇತರ ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡುವುದಕ್ಕೆ ಅವಕಾಶ ನಿರ್ಬಂಧಿಸುವAತಿಲ್ಲ. ಒಂದು ವೇಳೆ ಆ ರೀತಿಯಲ್ಲಿ ನಿರ್ಬಂಧ ವಿಧಿಸಿದಲ್ಲಿ ಪೆಟ್ರೋಲ್‌ಬಂಕ್‌ಗೆ ನೀಡಿದ ಅನುಮತಿ ಕಾನೂನು ಬಾಹಿರವಾಗಲಿದೆ. ಆದ್ದರಿಂದ ಮುಂದಿನ ೬೦ ದಿನಗಳಲ್ಲಿ ಅರ್ಜಿದಾರರ ಆಸ್ತಿಗೆ ಸಂಬAಧಿಸಿದAತೆ ನಿಯಮಗಳ ಅನುಸಾರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡುವಂತೆ ನ್ಯಾಯಪೀಠ ಪುರಸಭೆಗೆ ಸೂಚನೆ ನೀಡಿದೆ. ಅರ್ಜಿದಾರರಿಗೆ ತನ್ನ ತಂದೆಯ ಪಿತ್ರಾರ್ಜಿತ ಆಸ್ತಿಯಲ್ಲಿ ೧.೨೯ ಎಕರೆ ಜಮೀನು ಲಭ್ಯವಾಗಿತ್ತು. ಈ ಜಮೀನನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದರು.

(ಮೊದಲ ಪುಟದಿಂದ) ಈ ಅರ್ಜಿ ಪರಿಗಣಿಸಿದ್ದ ಜಿಲ್ಲಾಧಿಕಾರಿಗಳು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಅನುಮತಿ ನೀಡಿದ್ದರು. ಪರಿವರ್ತಿತ ಈ ಜಮೀನಿನಲ್ಲಿ ೧೪,೪೩೬ ಚದರಡಿಯಲ್ಲಿ ಪೆಟ್ರೋಲ್ ಬಂಕ್ ನಿರ್ಮಿಸಿದ್ದರು. ಇನ್ನುಳಿದ ಜಮೀನನ್ನು ವಾಣಿಜ್ಯ ಕಟ್ಟಡ ನಿರ್ಮಾಣಕ್ಕಾಗಿ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಬೈಲಹೊಂಗಲ ಪುರಸಭೆಯು ವಾಣಿಜ್ಯ ಕಟ್ಟಡಗಳಿಗೆ ನಕ್ಷೆ ಮಂಜೂರು ಮಾಡುವಂತೆ ಕೋರಿದ್ದ ಮನವಿಯನ್ನು ೨೦೨೨ರ ಅಕ್ಟೋಬರ್ ೧೩ರಂದು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀಶೈಲ ಅವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಉದ್ದೇಶಿಸಿದ ಭೂಮಿ ಪುರಸಭೆ ವ್ಯಾಪ್ತಿಗೆ ಬರಲಿದ್ದು, ಸ್ಥಳೀಯ ಸಂಸ್ಥೆ ಅದರಂತೆ ತೆರಿಗೆ ನಿಗದಿಪಡಿಸಿ ಸಂಗ್ರಹಿಸುತ್ತಿದೆ. ಜತೆಗೆ, ಕೃಷಿ ಭೂಮಿ ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಂಡಲ್ಲಿ ವಾಣಿಜ್ಯ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಅಗತ್ಯವಿಲ್ಲ ಎಂದು ವಾದ ಮಂಡಿಸಿದ್ದರು. ಆದರೆ ಇದಕ್ಕೆ ಸರ್ಕಾರದ ಪರ ವಕೀಲರು ಆಕ್ಷೇಪಿಸಿ ದ್ದರು. ಕಾನೂನಿನ ನಿಬಂಧನೆಗಳು ಪರಿಶೀಲಿಸಿದ ನಂತರ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಪ್ರಶ್ನೆಯಲ್ಲಿರುವ ಭೂಮಿ ಪುರಸಭೆ ಮಿತಿಯಲ್ಲಿರುವುದರಿಂದ, ಕರ್ನಾಟಕ ಭೂ ಕಂದಾಯ (ಕೆಎಲ್‌ಆರ್) ಕಾಯ್ದೆಯ ನಿಬಂಧನೆಗಳನ್ನು ಅನ್ವಯಿಸಲಾಗುವುದಿಲ್ಲ ಎಂದು ಗಮನಿಸಿದರು. ಈ ಕುರಿತು ಈ ಹಿಂದೆಯೇ ಎಸ್ ಕೃಷ್ಣಪ್ಪ ಎಂಬುವವರ ಪ್ರಕರಣದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ಬರುವ ಜಮೀನುಗಳಿಗೆ ಕೆಎಲ್‌ಆರ್ ಕಾಯ್ದೆಯ ನಿಬಂಧನೆಗಳು ಅನ್ವಯವಾಗುವುದಿಲ್ಲ ಎಂದೂ ಹೈಕೋರ್ಟ್ ತೀರ್ಪು ನೀಡಿರುವು ದನ್ನೂ ಈ ತೀರ್ಪಿನಲ್ಲಿ ಉಲ್ಲೇಖಿಸಿದೆ. ಮಹಾನಗರ ಪಾಲಿಕೆಯಂತೆಯೇ ಅದೇ ಸ್ಥಾನವನ್ನು ಹೊಂದಿರುವ ಕಾರಣ ಪುರಸಭೆಗೂ ಸಹ ಅದೇ ತತ್ವ ಅನ್ವಯಿಸುತ್ತದೆ ಎಂದು ಪೀಠ ಹೇಳಿದೆ. ಹೈಕೋರ್ಟ್ ತೀರ್ಪಿನಿಂದ ರಾಜ್ಯದಲ್ಲಿ ಸಾವಿರಾರು ಕೃಷಿ ಭೂಮಿ ಮಾಲೀಕರಿಗೆ ಅನುಕೂಲವಾಗಲಿದೆ.