ಮಡಿಕೇರಿ, ಜ. ೧೨: ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಿಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.

ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೦೨೪ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೦೧೪ ಪ್ರಕರಣಗಳು ಇತ್ಯರ್ಥಗೊಂಡಿವೆ. ೨೦೨೩-೨೪ನೇ ಆರ್ಥಿಕ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿAದ ೨೦೨೩ ರ ಏಪ್ರಿಲ್ ೧ ರಿಂದ ಡಿಸೆಂಬರ್ ತಿಂಗಳ ಅಂತ್ಯದವರೆಗೆ, ೨೨೦ ಪ್ರಕರಣಗಳು ದಾಖಲಾಗಿ ೨೧೦ ಪ್ರಕರಣಗಳು ಇತ್ಯರ್ಥಗೊಂಡು ಉಳಿದ ೧೦ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಕೆ.ಎಸ್. ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ. ೯೮೮೦೯೮೫೯೩೯ ನ್ನು ಸಂಪರ್ಕಿಸಬಹುದು.

ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬAಧಿಸಿದAತೆ ಒಟ್ಟು ರೂ. ೫ ಲಕ್ಷಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೩-೨೪ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ ಎಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಾಧ್ಯಕ್ಷರು ತಿಳಿಸಿದ್ದಾರೆ.