ಕೋವರ್ಕೊಲ್ಲಿ ಇಂದ್ರೇಶ್
ಬೆAಗಳೂರು, ಜ. ೧೩: ದೇಶದ ವಿರುದ್ಧ ಪಿತೂರಿ, ವಿಧ್ವಂಸಕ ಕೃತ್ಯ ನಡೆಸುವ ಸಂಚು ಹಾಗೂ ‘ಫಿದಾಯೀನ್' (ಆತ್ಮಹತ್ಯೆ) ದಾಳಿ ನಡೆಸಲು ಸಂಚು ರೂಪಿಸಿದ ಆರೋಪದಡಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಗೆ ಸೇರಿದ ಎಂಟು ಆರೋಪಿಗಳ ವಿರುದ್ಧ ರಾಷ್ಟಿçÃಯ ತನಿಖಾ ದಳ (ಎನ್ಐಎ) ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಓರ್ವ ಮತ್ತು ತಲೆಮರೆಸಿಕೊಂಡಿರುವ ಇಬ್ಬರ ಹೆಸರನ್ನೂ ಹೆಸರಿಸಲಾಗಿದೆ.
ಈ ಆರೋಪಿಗಳ ಪೈಕಿ ತಡಿಯಂಟವಿಡೆ ನಜೀರ್ ಭಯೋತ್ಪಾದನಾ ಕೃತ್ಯವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ೨೦೧೩ರಿಂದಲೂ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಜುನೈದ್ ಅಹಮದ್, ಸಲ್ಮಾನ್ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಉಳಿದಂತೆ ಆರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ಪ್ರಕರಣದ ಆರೋಪಿ ಟಿ ನಜೀರ್ ೨೦೦೮ ನೇ ಇಸವಿಯಲ್ಲಿ ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಮತ್ತು ಇತರೆಡೆಗಳಲ್ಲಿ ನಡೆಸಿದ ಸ್ಫೋಟದ ಮಾಸ್ಟರ್ ಮೈಂಡ್ ಆಗಿದ್ದಾನೆ. ಈ ಸ್ಫೋಟದಲ್ಲಿ ಈರ್ವರು ಸಾವನ್ನಪ್ಪಿದ್ದರು. ನಜೀರ್ ಕೇರಳದ ಕಣ್ಣೂರು ಮೂಲದವನಾಗಿದ್ದು ಸೋಮವಾರಪೇಟೆಯ ಹೊಸತೋಟದಲ್ಲಿ ಶುಂಠಿ ಬೇಸಾಯ ಮಾಡಲು ಭೂಮಿಯನ್ನು ಗುತ್ತಿಗೆಗೆ ಪಡೆದು ಶೆಡ್ ನಿರ್ಮಿಸಿ ಅಲ್ಲಿಯೇ ಸಭೆಗಳನ್ನು ನಡೆಸುತ್ತಿದ್ದ ಮತ್ತು ವಿಧ್ವಂಸಕ ಕೃತ್ಯ ನಡೆಸಲು ಅಡಗುದಾಣವನ್ನಾಗಿ ಮಾಡಿಕೊಂಡಿದ್ದ. ಈತನನ್ನು ಭಾರತ -ಬಾಂಗ್ಲಾ ಗಡಿಯಲ್ಲಿ ಬಂಧಿಸಲಾಗಿತ್ತು.
ಕಳೆದ ವರ್ಷ ಜುಲೈ ೧೮ರಂದು ಬೆಂಗಳೂರು ಸಿಸಿಬಿ ಪೊಲೀಸರು ಆರೋಪಿಗಳು ವಾಸವಿದ್ದ ಮನೆಯೊಂದರ ಮೇಲೆ ದಾಳಿ ಮಾಡಿದ್ದರು. ಆಗ ಶಸ್ತಾçಸ್ತç, ಹ್ಯಾಂಡ್ ಗ್ರೆನೇಡ್, ವಾಕಿ ಟಾಕಿಗಳ ಸಹಿತ ಏಳು ಜನರನ್ನು ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿತ್ತು. ಎನ್ಐಎ ತನಿಖೆಯಲ್ಲಿ ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ೨೦೧೭ರಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಸಲ್ಮಾನ್ ಖಾನ್ ಹಾಗೂ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಉಳಿದ ಆರೋಪಿಗಳಿಗೆ ಜೈಲಿನಲ್ಲೇ ತಡಿಯಂಟವಿಡೆ ನಜೀರ್ ಸಂಪರ್ಕಕ್ಕೆ ಬಂದಿದ್ದ. ಜೈಲಿನಲ್ಲಿ ಎಲ್ಲರನ್ನೂ ತನ್ನ ಬ್ಯಾರಕ್ಗೆ ಶಿಫ್ಟ್ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ನಜೀರ್, ಆರಂಭದಲ್ಲಿ ಜುನೈದ್ ಅಹಮದ್, ಸಲ್ಮಾನ್ ಖಾನ್ ಹಾಗೂ ನಂತರದಲ್ಲಿ ಉಳಿದ ಆರೋಪಿಗಳನ್ನು ಲಷ್ಕರ್ ಎ ತೊಯ್ಬಾ ಸಂಘಟನೆಯ ಸದಸ್ಯರನ್ನಾಗಿ ಸೇರಿಸಿಕೊಂಡಿದ್ದ ಎಂಬುದು ತನಿಖೆಯಲ್ಲಿ ಬಹಿರಂಗವಾಗಿತ್ತು.
ಆರೋಪಿ ನಜೀರ್ ಜೈಲಿನಲ್ಲಿಯೇ ಇತರ ಕೈದಿಗಳನ್ನು ಮತಾಂತರಿಸಲು ಪ್ರಯತ್ನಿಸುತಿದ್ದ ಎಂದು ಈ ಹಿಂದಿನ ಚಾರ್ಜ್ಶೀಟ್ನಲ್ಲಿ ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ತಡಿಯಂಟವಿಡೆ ನಜೀರ್, ಜುನೈದ್ ಅಹ್ಮದ್, ಸಲ್ಮಾನ್ ಖಾನ್, ಸೈಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹೀದ್ ತಬ್ರೇಜ್, ಸೈಯ್ಯದ್ ಮುದಾಸಿರ್ ಪಾಶಾ ಮತ್ತು ಮೊಹಮ್ಮದ್ ಫೈಸಲ್ ರಬ್ಬಾನಿ ವಿರುದ್ಧ ಭಾರತೀಯ ದಂಡ ಸಂಹಿತೆ, ಯುಎಪಿಎ ಕಾಯ್ದೆ, ಸ್ಪೋಟಕ ಹಾಗೂ ಶಸ್ತಾçಸ್ತç ನಿಗ್ರಹ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಎನ್ಐಎ ಈ ಚಾರ್ಜ್ಶೀಟ್ ದಾಖಲಿಸಿದೆ.
ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ವಿದೇಶಕ್ಕೆ ತೆರಳಿರುವ ಜುನೈದ್ ಅಹಮದ್ ಇಲ್ಲಿನ ಜೈಲಿನ ಒಳಗೆ ಹಾಗೂ ಹೊರಗೆ ಭಯೋತ್ಪಾದನಾ ಚಟುವಟಿಕೆ ನಡೆಸಲು ವಿದೇಶದಿಂದಲೇ ಹಣ ಒದಗಿಸುತ್ತಿದ್ದ. ಅಲ್ಲದೇ, ಹ್ಯಾಂಡ್ ಗ್ರೆನೇಡ್, ವಾಕಿ ಟಾಕಿಗಳನ್ನು ಉಳಿದ ಆರೋಪಿಗಳಿಗೆ ತಲುಪಿಸುವ ಜವಾಬ್ದಾರಿಯನ್ನು ಸಲ್ಮಾನ್ ಖಾನ್ಗೆ ವಹಿಸಲಾಗಿತ್ತು. ಅವುಗಳನ್ನು ಬಳಸಿಕೊಂಡು ತಡಿಯಂಟವಿಡೆ ನಜೀರ್ನನ್ನು ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಆತ್ಮಾಹುತಿ ದಾಳಿ ಮಾಡಿ, ಆತ ಪರಾರಿಯಾಗಲು ಬೇಕಾದ ಸಕಲ ಸಿದ್ಧತೆಗಳನ್ನು ಆರೋಪಿಗಳು ಆರಂಭಿಸಿದ್ದರು. ಕೃತ್ಯದ ತಯಾರಿಯ ಭಾಗವಾಗಿ ಪೊಲೀಸ್ ಸಮವಸ್ತçಗಳನ್ನು ಖರೀದಿಸಿ ನಕಲಿ ಪೊಲೀಸ್ ಸೃಷ್ಟಿಸುವ ಮೂಲಕ ನಜೀರ್ನನ್ನು ಸೆರೆಯಿಂದ ಬಿಡಿಸಿಕೊಳ್ಳಲು ವ್ಯವಸ್ಥಿತವಾದ ಪ್ಲಾನ್ ರೂಪಿಸಲಾಗಿತ್ತು. ಆದರೆ ಅಷ್ಟರಲ್ಲೇ ಜೈಲಿನ ರಾತ್ರಿ ಕರೆಗಳ ಬಗ್ಗೆ ಕಳ್ಳಗಿವಿ ಇಟ್ಟಿದ್ದ ಸಿಸಿಬಿ ಪೊಲೀಸರು ಎಲ್ಲರನ್ನೂ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿ ಆಗಿದ್ದರು. ಈ ಎಲ್ಲಾ ಅಂಶಗಳನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.