ಮಡಿಕೇರಿ, ಜ. ೧೩: ಹಿರಿಯ ಸಾಹಿತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ, ಕುಶಾಲನಗರದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಎಸ್.ಸಿ. ರಾಜಶೇಖರ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ಸೂಚಿಸಿದೆ. ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಡೆದ ಸಂತಾಪ ಸೂಚನಾ ಸಭೆಯಲ್ಲಿ ಮಾತನಾಡಿದ ಕ.ಸಾ.ಪ ಮಾಜಿ ಅಧ್ಯಕ್ಷÀ ಟಿ.ಪಿ.ರಮೇಶ್, ಸೋಮವಾರಪೇಟೆ ತಾಲೂಕಿನಲ್ಲಿ ಕನ್ನಡ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ಕನ್ನಡ ಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದ ರಾಜಶೇಖರ್ ಅವರು ಅಧ್ಯಾಪಕರಾಗಿ, ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾಗಿ ದುಡಿದವರು ಎಂದರು.
ಈ ಸಂದರ್ಭ ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ಎಸ್.ಐ. ಮುನೀರ್ ಅಹ್ಮದ್ ಜಿಲ್ಲಾ ಕ.ಸಾ.ಪ. ಗೌರವ ಕಾರ್ಯದರ್ಶಿ ರೇವತಿ ರಮೇಶ್, ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷೆ ತುಳಸಿ ಮೋಹನ್, ವೀರಾಜಪೇಟೆ ತಾಲೂಕು ಕ.ಸಾ.ಪ ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ, ಮಡಿಕೇರಿ ತಾಲೂಕು ಕ.ಸಾ.ಪ ಗೌರವ ಕಾರ್ಯದರ್ಶಿ ರಿಶಿತ್ ಮಾದಯ್ಯ, ಸಂಘಟನಾ ಕಾರ್ಯದರ್ಶಿ ಪ್ರೇಮ ರಾಘವಯ್ಯ, ಪಾಂಡನ ಪುಷ್ಪವೇಣಿ ಮತ್ತು ಕಚೇರಿ ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.