ವೀರಾಜಪೇಟೆ, ಜ. ೧೩: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಎ.ಎಸ್. ಪೊನ್ನಣ್ಣ ವೀರಾಜಪೇಟೆಯ ಗೃಹ ಕಚೇರಿಯಲ್ಲಿ ತಾಲೂಕಿನ ಸುಮಾರು ೨೩೦ ಸದಸ್ಯರಿಗೆ ಉಚಿತವಾಗಿ ಗ್ಯಾಸ್ ಸ್ಟೌವ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ, ಪ್ರಧಾನಮಂತ್ರಿಗಳ ಈ ಯೋಜನೆ ಅರ್ಥಪೂರ್ಣವಾಗಿದೆ ಎಂದು ಅವರ ಈ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿ ಫಲಾನುಭವಿಗಳು ಇದರ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಹೇಳಿದರು. ಗ್ಯಾಸ್ ಏಜೆನ್ಸಿಯು ಕೂಡ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೌಲಭ್ಯವನ್ನು ಒದಗಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭ ವೀರಾಜಪೇಟೆಯ ಶ್ರೀವಾರಿ ಗ್ಯಾಸ್ ಏಜೆನ್ಸಿ ಮಾಲೀಕ ಸಂತೋಷ್ ಕುಮಾರ್, ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯ ಎಸ್.ಹೆಚ್ ಮತೀನ್, ಜಿಲ್ಲಾ ವಕ್ಫ್ ಬೋರ್ಡ್ನ ಸದಸ್ಯ ಹಾಕಿಪ್ ಮನ್ನ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಇದ್ದರು.