ಪೊನ್ನಂಪೇಟೆ, ಜ. ೧೩: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗೆ ಪೊನ್ನಂಪೇಟೆಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಗೋಣಿಕೊಪ್ಪಲು ಸಮೀಪದ ಅರವತ್ತೋಕ್ಲು ಗ್ರಾಮದ ವಿ.ಆರ್. ಪ್ರಶಾಂತ್ ಎಂಬವರು ಗೋಣಿಕೊಪ್ಪಲು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕಿನಿAದ ಸಾಲ ಪಡೆದು ಅದಕ್ಕಾಗಿ ಚೆಕ್ ನೀಡಿದ್ದರು. ಬಳಿಕ ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿಯಾಗದ ಕಾರಣ ಬ್ಯಾಂಕ್ ವತಿಯಿಂದ ನೋಟೀಸ್ ಜಾರಿ ಮಾಡಲಾಗಿತ್ತು.
ಇದಕ್ಕೂ ಸ್ಪಂದಿಸದ ಕಾರಣ ಚೆಕ್ಕನ್ನು ನಗದೀಕರಿಸಲು ಬ್ಯಾಂಕಿಗೆ ಸಲ್ಲಿಸಲಾಗಿತ್ತು. ಈ ವೇಳೆ ಆರೋಪಿಯ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದರಿಂದ ಚೆಕ್ ಅಮಾನ್ಯಗೊಂಡಿತು. ಈ ಹಿನ್ನೆಲೆಯಲ್ಲಿ ಪೊನ್ನಂಪೇಟೆ ನ್ಯಾಯಾಲಯದಲ್ಲಿ ಚೆಕ್ ಅಮಾನ್ಯ ಕುರಿತು ಗೋಣಿಕೊಪ್ಪಲು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನಿAದ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿದ ಪೊನ್ನಂಪೇಟೆಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಆರೋಪಿಗೆ ದಂಡ ಸಹಿತ ಶಿಕ್ಷೆ ವಿಧಿಸಿದೆ. ಜೊತೆಗೆ ದಂಡ ಪಾವತಿಸುವಂತೆಯೂ ಆದೇಶಿಸಿರುವ ನ್ಯಾಯಾಲಯ ತಪ್ಪಿದಲ್ಲಿ ಮೂರು ತಿಂಗಳ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.