ವೀರಾಜಪೇಟೆ, ಜ. ೧೩: ವಿದ್ಯಾರ್ಥಿಗಳ ಜೀವನ ಮಹತ್ವ ವಾದದ್ದು ಮಾದಕ ವಸ್ತುಗಳನ್ನು ದೂರಮಾಡಿ ಮುಂದಿನ ಭವಿಷ್ಯದ ಕಡೆಗೆ ಗಮನಹರಿಸುವ ಮೂಲಕ ಗುರಿ ಮುಟ್ಟುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದರು.
ವೀರಾಜಪೇಟೆ ಬಳಿಯ ಕೊಡಗು ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಆಯೋಜಿಸ ಲಾಗಿದ್ದ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕರ್ತವ್ಯದೊಂದಿಗೆ ಬಡ ಜನರ ಸೇವೆ ಮುಖ್ಯ. ಕೊಡಗು ದಂತ ವೈದ್ಯಕೀಯ ಕಾಲೇಜು ತನ್ನ ಅತ್ಯುತ್ತಮ ಸೌಲಭ್ಯಗಳ ಮೂಲಕ ಸಮಾಜಕ್ಕೆ ಉತ್ತಮ ದಂತ ಸೇವೆಯನ್ನು ನೀಡುತ್ತಿರುವುದು ಶ್ಲಾಘನಿಯ ಎಂದ ಅವರು ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಕಲೆ, ಪಠ್ಯೇತರ ಚಟುವಟಿಕೆ ಗಳಲ್ಲಿಯು ಭಾಗವಹಿಸ ಬೇಕು ಹಾಗೂ ದುಶ್ಚಟಗಳಿಂದ ದೂರ ಇದ್ದು. ಮಾದಕ ವಸ್ತುಗಳು ಕಂಡಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಹೇಳಿದರು.
ಕೊಡಗು ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ಸುನೀಲ್ ಮುದ್ದಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೊಡಗು ದಂತ ಕಾಲೇಜಿನ ವಿದ್ಯಾರ್ಥಿಗಳ ಸಂಘ ಉತ್ತಮ ನಾಯಕತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಸಾಕಷ್ಟು ಸ್ಪರ್ಧೆ ಚಟುವಟಿಕೆಗಳಿಗೆ ಒತ್ತು ನೀಡುವಂತ ವೇದಿಕೆಯಾಗಿ ಅಂರ್ರಾಷ್ಟಿçÃಯ ಮಟ್ಟದಲ್ಲಿ ಗುರುತಿಸು ವಂತಾಗಿದೆ. ನಮ್ಮ ಕಾಲೇಜಿನಲ್ಲಿ ಕಲಿತಿರುವ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಾಲೇಜು ಅಂತರರಾಷ್ಟಿçಯ ಮಟ್ಟದಲ್ಲಿ ಒಡಂಬಡಿಕೆ ಮಾಡಿಕೊಂಡಿರುವು ದರಿಂದ ಉತ್ತಮ ಬೆಳವಣಿಗೆ ಯಾಗಿರುವುದಾಗಿ ಹೇಳಿದರು.
ಪ್ರೊಫೆಸರ್ ಡಾ.ಅನ್ಮೊಲ್ ಕಾಲ್ಹ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಮೌಲ್ಯಾಧರಿತ ಶಿಕ್ಷಣ ಮತ್ತು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳು ವಂತಾಗಬೇಕು ಎಂದರು. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ.ಪೊನ್ನಪ್ಪ ಅವರು ೨೦೨೩-೨೪ ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋದಿಸಿದರು.
ವಿವಿಧ ಸ್ನಾತಕೋತ್ತರ ಪದವಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಡಾ. ಶ್ರಯನ ನಾಣಯ್ಯ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿಲ್ನಾ ಸೇರಿದಂತೆ ಎಲ್ಲಾ ವಿದ್ಯಾರ್ಥಿ ಗಳು, ಉಪನ್ಯಾಸಕ ವೃಂದದವರು ಇದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.