ದ.ಸಂ.ಸ.ದಿAದ ಪ್ರತಿಭಾ ಪುರಸ್ಕಾರ
ಗೋಣಿಕೊಪ್ಪಲು, ಜ. ೧೩: ವಿಶ್ವದಲ್ಲಿಯೇ ಅತ್ಯಂತ ಪವಿತ್ರವಾದ ಸಂವಿಧಾನವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ. ಪ್ರಪಂಚದ ೨೦೨ ದೇಶಗಳಲ್ಲಿ ಭಾರತ ದೇಶಕ್ಕೆ ಉತ್ತಮ ಗೌರವ ಲಭಿಸುತ್ತಿದೆ ಎಂದರೆ ಇದಕ್ಕೆ ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವೇ ಮೂಲ ಕಾರಣ. ಸಂವಿಧಾನದಿAದ ನಮ್ಮ ಬದುಕು ಸುಧಾರಣೆ ಕಂಡಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ ನುಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಪೊನ್ನಂಪೇಟೆ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪದವಿಪೂರ್ವ ಕಾಲೇಜಿನ ಹಾಗೂ ಸರ್ಕಾರಿ ಪ್ರೌಢಶಾಲೆಯ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಉಪನ್ಯಾಸಕ ಹಾಗೂ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ನುರಿತ ಅಧ್ಯಾಪಕವೃಂದ ತಮಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ಇಂತಹ ಶಿಕ್ಷಕರು ಅಪಾರ ಜ್ಞಾನವನ್ನು ಹೊಂದಿರುವವರಾಗಿದ್ದಾರೆ.
ಉತ್ತಮ ಶಿಕ್ಷಕರಿಂದ ಸಾಕಷ್ಟು ಜ್ಞಾನವನ್ನು ವಿದ್ಯಾರ್ಥಿಗಳು ಪಡೆಯಲು ಸರ್ಕಾರಿ ಕಾಲೇಜುಗಳು ಉತ್ತಮ ವೇದಿಕೆ ಆಗುತ್ತಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಕಠಿಣ ಶ್ರಮ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡುವಂತಾಗಬೇಕು ಎಂದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಹೆಚ್.ಎಲ್. ದಿವಾಕರ್ ಸ್ವಾಗತದೊಂದಿಗೆ ಪ್ರಸ್ತಾವಿಕವಾಗಿ ಮಾತನಾಡಿ, ಕಳೆದ ೧೨ ವರ್ಷಗಳಿಂದ ಸಂಘಟನೆ ವತಿಯಿಂದ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ತೆರಳಿ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸನ್ಮಾನ ಸ್ವೀಕರಿಸಿದ ಹಲವು ವಿದ್ಯಾರ್ಥಿಗಳು ಕೆ.ಎ.ಎಸ್. ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಉತ್ತಮ ಉದ್ಯೋಗದಲ್ಲಿದ್ದಾರೆ. ಇದು ಮಾದರಿ ಆಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಹೆಚ್ಚಿನ ಧೈರ್ಯ ತುಂಬಲು ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.
ಪೊನ್ನಂಪೇಟೆ ದ.ಸಂ.ಸ. ತಾಲೂಕು ಸಂಚಾಲಕ ಹೆಚ್.ಆರ್. ಜಗದೀಶ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಾದ ಪ್ರೀತಿ ಚಿಕ್ಕಮಾದಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಅತ್ಯಂತ ಉತ್ತಮ ಕೆಲಸ. ಶಿಕ್ಷಕರು ರಾಷ್ಟçದ ಕಣ್ಣಾಗಿದ್ದಾರೆ. ಇಂದು ವಿದ್ಯಾರ್ಥಿಗಳನ್ನು ಸಮಾಜದ ಉತ್ತಮ ನಾಗರಿಕರನ್ನಾಗಿ ಮಾಡುವ ದೊಡ್ಡ ಜವಾಬ್ದಾರಿ ಶಿಕ್ಷಕರು ಹೊಂದಿದ್ದಾರೆ ಎಂದರು.
ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಮುಖಂಡ ಎನ್. ವೀರಭದ್ರಯ್ಯ, ಪೊನ್ನಂಪೇಟೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್. ರಮೇಶ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಪೊನ್ನಂಪೇಟೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಂ.ವೈ. ಚಂಗಪ್ಪ, ಸಮಾಜ ಸೇವಕ ಎಂ.ಟಿ. ಜಾರ್ಜ್, ಕಾನೂನು ಪದವಿ ವಿದ್ಯಾರ್ಥಿನಿ ಹೆಚ್.ಎಲ್. ಕಾವ್ಯ, ದಸಂಸ ವಿದ್ಯಾರ್ಥಿ ಒಕ್ಕೂಟದ ಮುಖಂಡ ಸಂತೋಷ್ ಕುಮಾರ್, ಮಡಿಕೇರಿ ನಗರ ಸಂಚಾಲಕ ಸಿದ್ದೇಶ್ವರ ಸೇರಿದಂತೆ ಇನ್ನಿತರ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕೀರ್ತಿ ಪ್ರಾರ್ಥಿಸಿ, ಶಾಲೆಯ ಶಿಕ್ಷಕಿ ಹೆಚ್.ಆರ್. ನಳಿನಿ ಈಶ ನಿರೂಪಿಸಿ, ಉಪ ಪ್ರಾಂಶುಪಾಲ ಚಂಗಪ್ಪ ವಂದಿಸಿದರು.