ಕುಶಾಲನಗರ, ಜ. ೧೪: ವಚನಕಾರರ ಪರಂಪರೆಯ ಮರೆತು ಹೋದ ಮೌಲ್ಯಗಳನ್ನು ಪುನಃಸ್ಮರಣೆ ಮಾಡುವ ಕೆಲಸ ವಚನಗಳ ಪಠನ ಹಾಗೂ ಮನನದಿಂದ ಆಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ "ವಚನ ಗಾಯನ ಸ್ಪರ್ಧಾ ಕಾರ್ಯಕ್ರಮ"ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯ ವಿಶ್ವದ ಮೇರು ಸಾಹಿತ್ಯವಾಗಿದೆ ಕುಶಾಲನಗರ, ಜ. ೧೪: ವಚನಕಾರರ ಪರಂಪರೆಯ ಮರೆತು ಹೋದ ಮೌಲ್ಯಗಳನ್ನು ಪುನಃಸ್ಮರಣೆ ಮಾಡುವ ಕೆಲಸ ವಚನಗಳ ಪಠನ ಹಾಗೂ ಮನನದಿಂದ ಆಗಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಬಸವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ "ವಚನ ಗಾಯನ ಸ್ಪರ್ಧಾ ಕಾರ್ಯಕ್ರಮ"ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ವಚನ ಸಾಹಿತ್ಯ ವಿಶ್ವದ ಮೇರು ಸಾಹಿತ್ಯವಾಗಿದೆ ಪ್ರಾಂಶುಪಾಲ ಕೆ. ಪ್ರಕಾಶ್, ಮಡಿಕೇರಿ ಲಯನ್ಸ್ ಅಧ್ಯಕ್ಷ ಮೋಹನಕುಮಾರ್, ವಚನ ಸಾಹಿತ್ಯ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎಸ್. ಮೂರ್ತಿ, ಕೋಶಾಧಿಕಾರಿ ಸಿ.ಎ. ರಾಜು, ಉಪನ್ಯಾಸಕರಾದ ಕೆ.ಆರ್. ರಮೇಶ್, ವರ್ಷಾ, ಶಿವಕುಮಾರ್, ಸಂಗೀತಾ, ಶಿಕ್ಷಕ ಪುಟ್ಟರಾಜು ಇದ್ದರು.
ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಂದ ವಚನ ಗಾಯನ ನಡೆಯಿತು. ಉಪನ್ಯಾಸಕಿ ವರ್ಷಾ ಸ್ವಾಗತಿಸಿದರು. ರಮೇಶ್ ನಿರೂಪಿಸಿ, ಜಗದೀಶ್ ವಂದಿಸಿದರು.