ಮಡಿಕೇರಿ, ಜ. ೧೭: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾ. ೧೦.೧೨.೨೦೧೯ ರಂದು ಬೆಳಿಗ್ಗೆ ಶಾಲೆಗೆಂದು ತೋಟದ ಒಳಗೆ ಕಾಲುದಾರಿಯಲ್ಲಿ ಹೋಗುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೂಲತಃ ಹುಣಸೂರುವಿನ ನಿವಾಸಿ ಹಾಲಿನ ವ್ಯಾನ್ನ ಚಾಲಕ ಸೂರ್ಯನಾಯಕ ವಿರುದ್ಧ ಮಡಿಕೇರಿಯಲ್ಲಿರುವ ಜಿಲ್ಲಾ ಮಹಿಳಾ ಪೊಲೀಸ್
ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ - ಅಪರಾಧಿಗೆ ಸಜೆ
(ಮೊದಲ ಪುಟದಿಂದ) ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ನಡೆಸಿದ ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೆಚ್. ಸಿ. ಶಾಮ್ ಪ್ರಸಾದ್ ಅವರು ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಐ.ಪಿ.ಸಿ. ಮತ್ತು ಪೋಕ್ಸೋ ಕಾಯ್ದೆ ಅಡಿ ೩ ವರ್ಷ ಸಜೆ ಮತ್ತು ರೂ ೧೫,೦೦೦ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಬಿ. ಎಸ್. ರುದ್ರಪ್ರಸನ್ನ ವಾದ ಮಂಡಿಸಿದರು.