ಕೂಡಿಗೆ: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

ದಿನದ ಮಹತ್ವದ ಕುರಿತು ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀಣಾ ವಿಜಯ ಮಾತನಾಡಿ, ಸ್ವಾಮಿ ವಿವೇಕಾನಂದÀರ ಆದರ್ಶ ಮತ್ತು ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿ ಕೊಳ್ಳಬೇಕು. ಭಾರತೀಯ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸಿದ ಪ್ರಥಮ ವ್ಯಕ್ತಿಯಾಗಿರುತ್ತಾರೆ, ವಿದ್ಯಾರ್ಥಿಗಳು ಇವರ ಉದಾತ್ತ ವ್ಯಕ್ತಿತ್ವ, ಬದುಕಿನ ದಾರಿ, ಜೀವನದಲ್ಲಿ ಉತ್ತಮ ಸಾಧನೆ ಮಾಡಲು ರಾಷ್ಟçದ ಸಮಗ್ರತೆ ಹಾಗೂ ಏಕತೆಯನ್ನು ಸಾರುವ ಸಂದೇಶಗಳು ವಿದ್ಯಾರ್ಥಿ ಗಳಿಗೆ ಬಹು ಮುಖ್ಯವಾಗಿರುತ್ತದೆ ಎಂದರು. ಈ ಸಂದರ್ಭ ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಸಭೆಯಲ್ಲಿ ಶಾಲಾ ಶಿಕ್ಷಕರ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.