ಬರ ಪರಿಹಾರ ಹಣ ದುರ್ಬಳಕೆ ತಡೆಯಲು ‘ಫ್ರೂಟ್ಸ್’ ತಂತ್ರಾAಶ ಅಭಿವೃದ್ಧಿ : ಕೃಷ್ಣ ಬೈರೇಗೌಡ
ರಾಯಚೂರು, ಜ. ೧೬: ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷ ಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾAಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ರಾಯಚೂರಿನಲ್ಲಿ ಮಂಗಳವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ರೈತರ ಬರ ಪರಿಹಾರ ಹಣವನ್ನು ಅಧಿಕಾರಿಗಳ ಮೂಲಕ ತಲುಪಿಸುತ್ತಿತ್ತು. ಆದರೆ, ಈ ವೇಳೆ ಸಾಕಷ್ಟು ಹಣ ದುರ್ಬಳಕೆ ಪ್ರಕರಣಗಳು ಕಂಡು ಬರುತ್ತಿತ್ತು. ಪರಿಹಾರದ ಹಣವೂ ಸಿಗದೆ ರೈತರು ಪರಿತಪಿಸುವ ಸ್ಥಿತಿ ಇತ್ತು. ಹೀಗಾಗಿ ಈ ಎಲ್ಲಾ ಅಕ್ರಮಗಳಿಗೆ ತಡೆಯೊಡ್ಡುವ ಸಲುವಾಗಿ “ಫ್ರೂಟ್ಸ್” ತಂತ್ರಾAಶವನ್ನು ಅಭಿವೃದ್ಧಿಪಡಿಸಲಾಗಿದೆ ಎಂದರು. ಇದೀಗ ರಾಜ್ಯಾದ್ಯಂತ ಎಲ್ಲಾ ರೈತರ ಒಟ್ಟು ಜಮೀನಿನ ವಿಸ್ತೀರ್ಣ ಹಾಗೂ ಬೆಳೆ ಹಾನಿ ಕುರಿತ ಮಾಹಿತಿಯನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನಮೂದಿಸಲಾಗಿದೆ. ಮೊದಲ ಕಂತಿನ ಪರಿಹಾರವನ್ನು ಯಾವುದೇ ತಾಂತ್ರಿಕ ದೋಷವಿಲ್ಲದೆ, ಹಣ ದುರುಪಯೋಗವಾಗದೆ ನೇರವಾಗಿ ರೈತರಿಗೆ ತಲುಪಿಸಲು ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇನ್ನೂ ಒಂದು ವಾರದೊಳಗೆ ರಾಜ್ಯದ ೨೫ ಲಕ್ಷ ರೈತರು ಪರಿಹಾರ ಹಣ ಪಡೆಯಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಸುವರ್ಣ ಪೊಲೀಸ್ ಭವನ ನಿರ್ಮಾಣ-ಸಿಎಂ
ಬೆAಗಳೂರು, ಜ. ೧೬: ಕರ್ನಾಟಕ ನಾಮಕರಣಗೊಂಡು, ಏಕೀಕರಣದ ೫೦ ವರ್ಷದ ನೆನಪಿಗಾಗಿ ರಾಜ್ಯದಲ್ಲಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚವನ್ನು ರೂ. ೧,೦೦೦ ದಿಂದ ೧,೫೦೦ಕ್ಕೆ ಹೆಚ್ಚಿಸಲಾಗುವುದು ಎಂದರು. ಸೆನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು. ಬೆಂಗಳೂರು ನಗರದಲ್ಲಿ ೮ ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚು ಮಾಡÀಲಾಗುವುದು. ರಾಜ್ಯವನ್ನು ಡ್ರಗ್ ಮುಕ್ತಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುವುದಾಗಿ ಸಿದ್ದರಾಮಯ್ಯ ಹೇಳಿದರು. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಸಚಿವ ಜಿ. ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು. ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಡಿಸಿಪಿಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು. ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು.
ಬೆಂಗಳೂರು: ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ
ಬೆಂಗಳೂರು, ಜ. ೧೬: ನಗರದಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಆಟೋವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ೪೮ ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಾರುತಿ ನಗರದ ಮಹದೇಶ್ವರನಗರದ ನಿವಾಸಿ ಚಂದ್ರಶೇಖರ್ ತನ್ನ ೧೩ ಮತ್ತು ೯ ವರ್ಷದ ಮಕ್ಕಳನ್ನು ಕರೆದುಕೊಂಡು ಪೀಣ್ಯ ೨ನೇ ಹಂತದಿAದ ಹೆಗ್ಗನಹಳ್ಳಿ ಮುಖ್ಯರಸ್ತೆ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಕ್ಕಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೀಣ್ಯ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತದಲ್ಲಿ, ಮಹಾರಾಷ್ಟçದ ನಾಂದೇಡ್ ಮೂಲದ ಕೂಲಿ ಕಾರ್ಮಿಕ ನಾಗೇಶ್ (೨೦) ರಾತ್ರಿ ೯.೧೫ ರ ಸುಮಾರಿಗೆ ಬಳ್ಳಾರಿ ರಸ್ತೆಯಲ್ಲಿ ತಮ್ಮ ಸ್ನೇಹಿತರೊಂದಿಗೆ ಚಹಾ ಕುಡಿಯಲು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ನಾಗೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಬಾಣಸವಾಡಿ ಟ್ರಾಫಿಕ್ ಪೊಲೀಸ್ ವ್ಯಾಪ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಮೆಲ್ವಿನ್ ಜೋಶುವಾ (೨೫) ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಸೋಮವಾರ ನಸುಕಿನ ೨ ಗಂಟೆ ಸುಮಾರಿಗೆ ಸಿಎಂಆರ್ ರಸ್ತೆಯ ಗೇಟ್ಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ಕಳೆದುಕೊಂಡಿತ್ತು. ತಲೆಗೆ ಗಾಯವಾಗಿದ್ದ ಮೆಲ್ವಿನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಂದು ಅಪಘಾತದಲ್ಲಿ ಖಾಸಗಿ ಸಂಸ್ಥೆಯೊAದರಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳಂದೂರು ನಿವಾಸಿ ಉಮಂಗ್ ಬೋಹ್ರಾ (೨೨) ಸೋಮವಾರ ನಸುಕಿನ ವೇಳೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಬೇಗೂರು-ಎಲೆಕ್ಟಾçನಿಕ್ಸ್ ಸಿಟಿ ರಸ್ತೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬAಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.