ಮಡಿಕೇರಿ, ಜ. ೧೭: ಸುವರ್ಣ ಕರ್ನಾಟಕ ೫೦ರ ಸಂಭ್ರಮದ ಹಿನ್ನೆಲೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು,
ಕುಂದಚೇರಿ, ಅಯ್ಯಂಗೇರಿ, ಭಾಗಮಂಡಲ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಚೆಟ್ಟಿಮಾನಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಗ್ರಾಮಸಿರಿ ಕಾರ್ಯಕ್ರಮದ ಅಂಗವಾಗಿ ಇಂದು ವಿವಿಧ ಕ್ರೀಡಾಕೂಟ ನಡೆಯಿತು.
ಮಂಗೇರಿರ ಕುಂಞಪ್ಪ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಭಾಗಮಂಡಲ ಠಾಣಾಧಿಕಾರಿ ಶೋಭಾ ಲಮಾಣಿ ಕ್ರೀಡಾ ಜ್ಯೋತಿಯನ್ನು ಬೆಳಗುವ ಮೂಲಕ ಉದ್ಘಾಟಿಸಿದರು.
ಪುರುಷರಿಗೆ, ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಮ್ಯಾರಥಾನ್ ಓಟ ಸೇರಿದಂತೆ ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ, ಹಗ್ಗಜಗ್ಗಾಟ, ಥ್ರೋಬಾಲ್, ಕಬಡ್ಡಿ, ಮಕ್ಕಳಿಗೆ ಕಾಳು ಹೆಕ್ಕುವುದು, ಕಪ್ಪೆ ಜಿಗಿತ ಇನ್ನಿತರ ಆಟೋಟ ಕಾರ್ಯಕ್ರಮಗಳು ಜರುಗಿದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪರಿಷತ್ತು ಪ್ರಮುಖರು, ಗ್ರಾ.ಪಂ. ಅಧ್ಯಕ್ಷರುಗಳು, ಸದಸ್ಯರು ಈ ಸಂದರ್ಭ ಹಾಜರಿದ್ದರು.