ಸುಂಟಿಕೊಪ್ಪ, ಜ. ೨೬: ತಮಿಳು ಸಂಘದ ವತಿಯಿಂದ ಪೊಂಗಲ್ (ಮಕರ ಸಂಕ್ರಾAತಿ) ಹಬ್ಬದ ಆಚರ ಣೆಯ ಅಂಗವಾಗಿ ಕಳಸ ಮೆರವಣಿಗೆ ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಯಿತು.
ಸೋಮವಾರ ಮಾದಾಪುರ ರಸ್ತೆಯಲ್ಲಿರುವ ವೃಕ್ಷೋದ್ಭವ ಮಹಾಗಣಪತಿ ದೇವಾಲಯದಿಂದ ನೂರಾರು ಮಹಿಳೆಯರು, ಪುರುಷರು ಸೇರಿದಂತೆ ಮಕ್ಕಳು ಪೂಜೆ ನೆರವೇರಿಸಿ ಕೊಪ್ಪದ ನಾದಸ್ವರದೊಂದಿಗೆ ಹಾಲಿನ ಕಳಸ ಹೊತ್ತು ಮೆರವಣಿಗೆ ಅಯ್ಯಪ್ಪ ದೇವಾಲಯ ಅಲ್ಲಿಂದ ಚಾಮುಂಡೇ ಶ್ವರಿ ದೇವಾಲಯವರೆಗೆ ಬೆಳಿಗ್ಗೆ ಕಳಸಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ವೃಕ್ಷೋದ್ಭವ ದೇವಾಲಯದ ಟ್ರಸ್ಟಿ ಎ.ಲೋಕೇಶ್ ಕುಮಾರ್ ಅವರು ಶಿರಕ್ಕೆ ಕಳಸ ಇರಿಸುವ ಮೂಲಕ ಚಾಲನೆ ನೀಡಲಾಯಿತು.
ನಂತರ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಅಲ್ಲಿ ದೇವಿಗೆ ಅಭಿಷೇಕ ಮಾಡಿ ನಂತರ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ನೆರೆದಿದ್ದ ಭಕ್ತರಿಗೆ ಸಮಿತಿ ವತಿಯಿಂದ ಪೊಂಗಲ್ ಮತ್ತು ಅನ್ನ ಸಂತರ್ಪಣೆ ನೆರವೇರಿತು.
ಈ ಸಂದರ್ಭ ತಮಿಳು ಸಮಿತಿ ಅಧ್ಯಕ್ಷ ಅಯ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಎಂ.ಮAಜುನಾಥ್, ವಾಹನ ಚಾಲಕರ ಸಂಘದ ಅಧ್ಯಕ್ಷ ಸುರೇಶ, ದೊರೈ, ವಿಘ್ನೇಶ್, ಅರುಣಾ, ಸೂರ್ಯ, ಕುಶಾಲನಗರ ಪೊಂಗಲ್ ಸಮಿತಿ ಅಧ್ಯಕ್ಷ ಪಳನಿಸ್ವಾಮಿ, ಉಪಾಧ್ಯಕ್ಷ ಜಯರಾಮ್, ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಸಮಿತಿ ಸದಸ್ಯರು ಇದ್ದರು.