ಶ್ರೀಮಂಗಲದಲ್ಲಿ ಧಾರ್ಮಿಕ ಸಭೆ

ಗೋಣಿಕೊಪ್ಪಲು, ಜ. ೧೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವೀರಾಜಪೇಟೆ ತಾಲೂಕು ಪೊನ್ನಂಪೇಟೆ ವಲಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಶ್ರೀಮಂಗಲ, ಟಿ.ಶೆಟ್ಟಿಗೇರಿ, ಹುದಿಕೇರಿ ಕಾರ್ಯಕ್ಷೇತ್ರಗಳ ಆಶ್ರಯದಲ್ಲಿ ಶ್ರೀಮಂಗಲ ಅಯ್ಯಪ್ಪಸ್ವಾಮಿ ದೇವಸ್ಥಾನ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ನಡೆಯಿತು.

ಮುಂಜಾನೆಯಿAದಲೇ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ ಗುರುರಾಜ್ ಅಡಿಗರವರು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಆರಂಭಿಸಿದರು. ವಿವಿಧ ಕ್ಷೇತ್ರಗಳ ಸದಸ್ಯರುಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಮಿತಿಯ ಅಧ್ಯಕ್ಷ ಕಿಶನ್ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಟಿ.ಶೆಟ್ಟಿಗೇರಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಂಞAಗಡ ಅರುಣ್ ಭೀಮಯ್ಯ ಮಾತನಾಡಿ, ದೇಶದ ಪ್ರಗತಿಗೆ ಸರ್ಕಾರದ ಕೊಡುಗೆಯೊಂದಿಗೆ ಹಲವು ಸಂಘ ಸಂಸ್ಥೆಗಳ ಕೊಡುಗೆಯೂ ಕಾರಣವಾಗಿದೆ. ಕರ್ನಾಟಕದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅತ್ಯಂತ ಪ್ರಮುಖವಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ಜನಪರ ಕಾಳಜಿಯಿಂದ ಅನೇಕ ಯೋಜನೆಗಳನ್ನು ಬಡಜನತೆಗೆ ತಲುಪಿಸುವಲ್ಲಿ ಮುಂಚೂಣಿಯಲ್ಲಿದೆ. ಪದÀ್ಮಶ್ರೀ ಪುರಸ್ಕೃತ ಡಾ.ವೀರೇಂದ್ರ ಹೆಗಡೆಯವರ ಕೊಡುಗೆಯನ್ನು ಈ ನಾಡಿನ ಜನತೆ ಸದಾ ಸ್ಮರಿಸುತ್ತಾರೆ. ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವರು ಮಾಡುತ್ತಿರುವ ಸೇವೆ ಶ್ಲಾಘನೀಯ. ಸೇವಾಮನೋಭಾವ ಎಲ್ಲರಲ್ಲಿಯೂ ಮೂಡುವಂತಾಗಬೇಕು. ರಾಜ್ಯದಲ್ಲಿ ಲಕ್ಷಾಂತರ ಮಂದಿ ಸಾಮಾಜಿಕ ಪಿಡುಗಿನಿಂದ ಹೊರ ಬಂದಿದ್ದಾರೆ. ಇದಕ್ಕೆ ವೀರೇಂದ್ರ ಹೆಗಡೆಯವರ ನಿಸ್ವಾರ್ಥ ಸೇವೆ ಕಾರಣ ಎಂದರು.

ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಬಾನಂಗಡ ಅರುಣ್ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಧರ್ಮಾಧಿಕಾರಿಗಳು ಸಹಾಯಹಸ್ತ ನೀಡುತ್ತಾ ಬಂದಿದ್ದಾರೆ. ಈ ಬಾರಿ ಕೊಡಗಿನ ಗಡಿಭಾಗವಾದ ಕುಟ್ಟದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಕೃಷ್ಣ ದೇವಾಲಯಕ್ಕೆ ರೂ. ೨ ಲಕ್ಷ ಅನುದಾನ ಹಾಗೂ ಬಲ್ಯಮುಂಡೂರು ಬಸವೇಶ್ವರ ದೇವಾಸ್ಥಾನ ರೂ. ೨ ಲಕ್ಷ ಅನುದಾನವನ್ನು ದೇವಾಲಯದ ಅಭಿವೃದ್ಧಿಗೆ ನೀಡಿದ್ದಾರೆ. ಅಲ್ಲದೆ ಕೊಡಗಿನ ಹಲವು ದೇವಾಲಯಗಳ ಜೀರ್ಣೋದ್ಧಾರಕ್ಕಾಗಿ ಸಹಾಯಹಸ್ತ ನೀಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಜನರಿಗೆ ಖಾವಂದರಾದ ವೀರೇಂದ್ರ ಹೆಗಡೆಯವರು ನೀಡುತ್ತಾ ಬಂದಿದ್ದಾರೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿದರು. ಸಮಿತಿಯ ಉಪಾಧ್ಯಕ್ಷೆ ಬೊಳ್ಳಜಿರ ಸುಶೀಲ ಅಶೋಕ್, ಅಯ್ಯಪ್ಪಸ್ವಾಮಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಕಳ್ಳಿಚಂಡ ಎಂ. ಪರಶುರಾಮ್, ಶ್ರೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಳ್ಳಂಗಡ ವಸಂತಿ, ಜಿಲ್ಲಾ ಯೋಜನಾಧಿಕಾರಿ ಬಿ. ದಿನೇಶ್, ಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಪ್ಪಣಮಾಡ ನವ್ಯ ಕಾವೇರಮ್ಮ, ಶ್ರೀಮಂಗಲ ಆರಕ್ಷಕ ಉಪನಿರೀಕ್ಷಕ ಶಿವಾನಂದ ರದ್ರಾಟಿ, ಶ್ರೀಮಂಗಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಜ್ಜಮಾಡ ಟಿ. ಚಂಗಪ್ಪ ಸೇರಿದಂತೆ ಇನ್ನಿತರ ಗಣ್ಯರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪೂಜಾ ಸಮಿತಿಯ ಅಧ್ಯಕ್ಷರಾದ ಕಿಶನ್ ಪೂಜಾರಿ, ಉಪಾಧ್ಯಕ್ಷರಾದ ಸುಶೀಲ ಅಶೋಕ್, ಕಾರ್ಯದರ್ಶಿ ರಾಜೇಶ್, ಖಜಾಂಚಿ ವಿನಿಶ್, ಸಮಿತಿ ಸದಸ್ಯರಾದ ರಾಧಕರುಂಬಯ್ಯ, ವೀಣಾಬೊಳ್ಳಮ್ಮ, ರಮಾ, ಬಿ.ಟಿ. ಮೀನಾ, ಮನ್ನೇರ ಸರಸ್ವತಿ, ಬಬಿತ, ಮುರುಳಿ, ರಂಜಿತ, ಲೋಹಿತ್, ಲತಾ, ಉಷಾ, ನಿಖಿಲ್, ಸ್ವಾತಿ, ಅಜ್ಜಮಾಡ ಸಾವಿತ್ರಿ, ಬಾದುಮಂಡ ಲವ ಸೇರಿದಂತೆ ಇನ್ನಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅಜ್ಜಮಾಡ ಸಾವಿತ್ರಿ ಪ್ರಾರ್ಥಿಸಿ, ಸೇವಾಪ್ರತಿನಿಧಿ ಸರಳ ಸ್ವಾಗತಿಸಿ, ವಲಯ ಮೇಲ್ವಿಚಾರಕ ಜಿ.ಬಿ. ನರಸಿಂಹಮೂರ್ತಿ ನಿರೂಪಿಸಿ, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶ್ರೇಯಾ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಫಲಾನುಭವಿಗಳಿಗೆ ಜನಮಂಗಳ ಕಾರ್ಯಕ್ರಮದ ಅಡಿಯಲ್ಲಿ ವಿವಿಧ ಸಲಕರಣೆಗಳನ್ನು ವಿತರಿಸಲಾಯಿತು. ಸರ್ಕಾರಿ ಕಾರ್ಯಕ್ರಮದಡಿಯಲ್ಲಿ ಪಿ.ಎಂ. ದಿಶಾ, ಆಯುಷ್ಮಾನ್ ಕಾರ್ಡ್, ಸುಜ್ಞಾನನಿಧಿ ಶಿಷ್ಯವೇತನ ನೀಡಲಾಯಿತು. ವಿವಿಧ ವಲಯದಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.