ಮಡಿಕೇರಿ, ಜ. ೧೬: ತಾ. ೨೬ ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗ ಣದಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗಣರಾಜ್ಯೋತ್ಸವ ದಿನಾಚರಣೆ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕೃತಿಕ, ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಿದರು.

ಕಳೆದ ಬಾರಿಯಂತೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಹಾರ ಕಲ್ಪಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ರಾಷ್ಟçಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕಾ÷್ವಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯ ಕ್ರಮಗಳ ಸಂಬAಧಿಸಿದAತೆ ಸಚಿವರ ಭಾಷಣದಲ್ಲಿ ಬೆಳಕು ಚೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ಭಾಷಣ ಸಿದ್ಧಪಡಿಸಲು ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಮಾಹಿತಿ ಒದಗಿಸುವಂತೆ ನಿರ್ದೇಶನ ನೀಡಿದರು.

ಕ್ರೀಡಾಂಗಣ ಸ್ವಚ್ಛತೆ ಹಾಗೂ ಕುಡಿಯುವ ನೀರು ಪೂರೈಕೆಗೆ ಸಂಬAಧಿಸಿದAತೆ, ಕ್ರೀಡಾಂಗಣವನ್ನು ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು.

ಗಣರಾಜ್ಯೋತ್ಸವ ದಿನದಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬAಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ ಅವರು ಗಣರಾಜ್ಯೋತ್ಸವ ದಿನಾಚರಣೆ ಸಂಬAಧ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ್ ಅವರು ಗಣರಾಜ್ಯೋತ್ಸವ ಆಚರಣೆ ಸಂಬAಧ ಹಲವು ಮಾಹಿತಿ ನೀಡಿದರು. ಜಿ.ಪಂ. ಉಪಕಾರ್ಯದರ್ಶಿ ಧನರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ. ವಿಶಾಲ್ ಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸಿದ್ದೇಗೌಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ. ಚಂದ್ರಕಾAತ್, ಜಿಲ್ಲಾ ಖಜಾನಾಧಿಕಾರಿ ಬಿ.ಎನ್. ರಘುನಾಥ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ. ವಿಸ್ಮಯಿ, ಬಿಸಿಎಂ ಇಲಾಖೆ ಅಧಿಕಾರಿ ಎನ್. ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಪಿಎಂಜಿಎಸ್‌ವೈ ಇಂಜಿನಿಯರ್ ಪ್ರಭು, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಅನಿತಾ ಭಾಸ್ಕರ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ ಹಾಗೂ ಇತರರು ಇದ್ದರು.