ಮಡಿಕೇರಿ, ಜ. ೧೬: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾ, ತಾಲೂಕು ಮತ್ತು ಹೋಬಳಿ ಸಮಿತಿಯ ಪದಾಧಿಕಾರಿಗಳ ಸಭೆ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ತುಳುವೆರ ಜನಪದ ಕೂಟದ ಜಿಲ್ಲಾಧ್ಯಕ್ಷ ಬಿ.ಬಿ.ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಳು ಸಮ್ಮೇಳನ ನಡೆಸುವ ಕುರಿತು ಒಮ್ಮತ್ತದ ನಿರ್ಧಾರ ಕೈಗೊಳ್ಳಲಾಯಿತು.
ಕೊಡಗು ಜಿಲ್ಲೆಯಲ್ಲಿ ತುಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಒಂದೇ ವೇದಿಕೆಯಡಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ತುಳು ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಮುಖಂಡರುಗಳು ಹಾಗೂ ತುಳು ಭಾಷಿಕ ಜನಾಂಗ ಬಾಂಧವರು ಸಮ್ಮೇಳನದಲ್ಲಿ ತೊಡಗಿಸಿ ಕೊಳ್ಳುವಂತೆ ಬಿ.ಬಿ.ಐತ್ತಪ್ಪ ರೈ ಮನವಿ ಮಾಡಿದರು.
ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕöÈತಿ ಕುರಿತು ವಿಚಾರಗೋಷ್ಠಿಗಳು, ಸಾಂಸ್ಕöÈತಿಕ ಕಾರ್ಯಕ್ರಮಗಳು, ತುಳು ನಾಡಿನ ಸಂಸ್ಕöÈತಿ ಬಿಂಬಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆಯನ್ನು ಆಕರ್ಷ ಣೀಯಗೊಳಿಸಬೇಕು. ತುಳುನಾಡಿನ ಪ್ರಸಿದ್ಧ ಕಲಾವಿದರುಗಳನ್ನು ಆಹ್ವಾನಿ ಸುವ ಮೂಲಕ ಸಮ್ಮೇಳನವನ್ನು ವರ್ಣರಂಜಿತಗೊಳಿಸಬೇಕು. ಸಮ್ಮೇಳ ನಕ್ಕೆ ಸಂಬAಧಿಸಿದAತೆ ಜಿಲ್ಲೆಯ ಎಲ್ಲಾ ತುಳುಭಾಷಿಕ ಸಮುದಾಯದ ಪ್ರಮುಖರ ಮತ್ತು ಜಿಲ್ಲೆಯ ತುಳುಕೂಟದ ಪದಾಧಿಕಾರಿಗಳ ಸಭೆ ನಡೆಸಿ ಸಮಾಲೋಚನೆ ಮಾಡಬೇಕು. ಮುಂದಿನ ಸಭೆಯಲ್ಲಿ ಸಮ್ಮೇಳನದ ಯಶಸ್ಸಿಗಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲು ಸಭೆ ನಿರ್ಧಾರ ಕೈಗೊಂಡಿತು.
ತುಳುವೆರ ಜನಪದ ಕೂಟದ ಜಿಲ್ಲಾ ಉಪಾಧ್ಯಕ್ಷ ಬಿ.ವೈ.ಆನಂದ ರಘು, ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ, ಸಂಘಟನಾ ಕಾರ್ಯ ದರ್ಶಿ ರಾಜೀವ್ ಲೋಚನ, ಖಜಾಂಚಿ ಪ್ರಭು ರೈ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಕೆ.ಜಿ.ರಾಮಕೃಷ್ಣ, ಮಡಿಕೇರಿ ತಾಲೂಕು ಸಂಚಾಲಕ ಪ್ರಸಾದ್ ಬಿಳಿಗೇರಿ, ಸದಸ್ಯರುಗಳಾದ ಸಂಧ್ಯಾ ಗಣೇಶ್ ರೈ, ಲೀಲಾ ಶೇಷಮ್ಮ, ಕವಿತಾ ಕುಂದರ್, ಬಿ.ಎಸ್.ಜಯಪ್ಪ,