ಮಡಿಕೇರಿ, ಜ. ೧೬: ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗ ದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.
ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಸುಬ್ರಮಣ್ಯ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನೆರವೇರಿದವು.
ತಾ.೧೪ ರಂದು ಸಂಜೆ ೬ ಗಂಟೆಯಿAದ ಪ್ರಾರ್ಥನೆ, ಪುಣ್ಯಾಹ, ಸಪ್ತಶುದ್ಧಿ, ಪ್ರಾಸಾದ ಶುದ್ಧಿ, ರಾಕೋಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ದಿಶಾಬಲಿ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ತಾ.೧೫ ರಂದು ಬೆಳಿಗ್ಗೆ ೮ ಗಂಟೆಯಿAದ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ ಪೂಜೆ, ಆಶ್ಲೇಷ ಬಲಿ ಕಲಶಾಭಿಷೇಕ ಮಹಾಪೂಜೆ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನೆರವೇರಿತು.
ಸಂಜೆ ಸಾಯಂಪೂಜೆ, ರಂಗಪೂಜೆ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠಪೂಜೆ, ಶುದ್ಧಿಕಲಶಾಭಿಷೇಕ, ಮಂತ್ರಾಕ್ಷತೆ, ಅನ್ನ ಸಂತರ್ಪಣೆ ನಡೆಯಿತು.