ಪೊನ್ನAಪೇಟೆ, ಜ. ೧೮: ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ವತಿಯಿಂದ ೧೫ನೇ ವರ್ಷದ ಜಿಲ್ಲಾಮಟ್ಟದ ಜಮಾಅತ್‌ವಾರು ಹೊನಲು ಬೆಳಕಿನ ಮುಸ್ಲಿಂ ಕಪ್ ವಾಲಿಬಾಲ್ ಪಂದ್ಯಾವಳಿ ತಾ. ೧೯ ರಿಂದ ೨೧ ರವರೆಗೆ ವೀರಾಜಪೇಟೆ ತಾಲೂಕು ಮೈದಾನದಲ್ಲಿ ಜರುಗಲಿದೆ. ಈ ಪಂದಾವಳಿಯ ಅಂತಿಮ ಹಂತದ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷÀ ಪಿ.ಎ. ಹನೀಫ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು ರೂ. ೨೫ ಲಕ್ಷ ವೆಚ್ಚದಲ್ಲಿ ಈ ಪಂದ್ಯಾವಳಿಯನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಲು ಅಗತ್ಯ ಏರ್ಪಾಡುಗಳನ್ನು ಮಾಡಿಕೊಳ್ಳಲಾಗಿದೆ. ಈ ಪಂದ್ಯಾವಳಿಗಾಗಿ ಈಗಾಗಲೇ ೩೦ ತಂಡಗಳು ತಮ್ಮ ಹೆಸರು ನೋಂದಾಯಿಸಿಕೊAಡಿವೆ. ಮೊದಲೇ ನಿರ್ಧರಿಸಿರುವಂತೆ ನೊಂದಾಯಿತ ಜಮಾಅತ್ ತಂಡಗಳಲ್ಲಿ ಆಯಾ ಜಮಾಅತ್ ವ್ಯಾಪ್ತಿಯ ಸದಸ್ಯರನ್ನು ಹೊರತುಪಡಿಸಿದರೆ ಬೇರೆ ಯಾವುದೇ ಆಟಗಾರರಿಗೆ ಪಂದ್ಯಾವಳಿಯಲ್ಲಿ ಆಡಲು ಅವಕಾಶವಿರುವುದಿಲ್ಲ ಎಂದು ಹೇಳಿದರು.

ತಾ. ೧೯ ರಂದು ಸಂಜೆ ೪ ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಂದ್ಯಾವಳಿಯನ್ನು ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಮಾಜಿ ಅಧ್ಯಕ್ಷÀ ಎಂ.ಹೆಚ್. ಅಬ್ದುಲ್ ರಹಿಮಾನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ಡಿ.ಹೆಚ್. ಸೂಫಿ ಹಾಜಿ, ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷÀ ಪಿ.ಎಂ. ಹಕೀಮ್, ಮಡಿಕೇರಿಯ ವಕೀಲ ಕೆ.ಎಂ. ಕುಂಞ ಅಬ್ದುಲ್ಲ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಹಾನೀಫ್ ಹೇಳಿದರು.

ತಾ. ೨೧ ರಂದು ರಾತ್ರಿ ೭ ಗಂಟೆಗೆ ನಡೆಯುವ ಪಂದ್ಯಾವಳಿಯ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ವೀರಾಜಪೇಟೆ ಶಾಸಕÀ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮಡಿಕೇರಿ ಶಾಸಕ ಡಾ. ಮಂಥÀರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೈಸೂರಿನ ಆರ್. ಲಕ್ಷö್ಮಣ್ ಸೇರಿದಂತೆ ರಾಜಕೀಯ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು. ಅಲ್ಲದೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಎA. ಇಸ್ಮಾಯಿಲ್ ಮಾತನಾಡಿ, ೩ ದಿನಗಳ ಕಾಲವೂ ನಾಕ್‌ಔಟ್ ಮಾದರಿಯಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಪಂದ್ಯಾವಳಿ ವೇಳೆ ಯಾವುದೇ ತಾಂತ್ರಿಕ ಲೋಪ ಎದುರಾಗದಂತೆ ಮುಂಜಾಗ್ರತೆ ವಹಿಸಲು ಈಗಾಗಲೇ ಸಂಸ್ಥೆಯ ಅಧೀನದಲ್ಲಿ ತಾಂತ್ರಿಕ ಸಮಿತಿಯೊಂದನ್ನು ರಚಿಸಲಾಗಿದೆ.

ಶೀಘ್ರದಲ್ಲೇ ಪಂದ್ಯಾವಳಿಯ ಟೈಸ್ ಕಾರ್ಡನ್ನು ಬಿಡುಗಡೆಗೊಳಿಸ ಲಾಗುವುದು. ರಾಷ್ಟçಮಟ್ಟದಲ್ಲಿ ಮಾನ್ಯತೆ ಪಡೆದ ತೀರ್ಪುಗಾರರು ಈ ಪಂದ್ಯಾವಳಿಯ ತೀರ್ಪುಗಾರಿಕೆಯನ್ನು ನಿರ್ವಹಿಸಲಿದ್ದಾರೆ. ಪಂದ್ಯಾವಳಿಯನ್ನು ವೀಕ್ಷಿಸಲು ೫,೦೦೦ ಜನರ ಸಾಮರ್ಥ್ಯದ ತಾತ್ಕಾಲಿಕ ಗ್ಯಾಲರಿಯನ್ನು ನಿರ್ಮಾಣ ಮಾಡಲಾಗುತ್ತಿದೆ. ಪಂದ್ಯಾವಳಿಯಲ್ಲಿ ವಿಜೇತರಾಗುವ ಪ್ರಥಮ, ದ್ವಿತೀಯ ಮತ್ತು ತೃತೀಯ ತಂಡಗಳಿಗೆ ಆಕರ್ಷಕ ನಗದು ಬಹುಮಾನದೊಂದಿಗೆ ವಿನೂತನ ಪಾರಿತೋಷಕವನ್ನು ನೀಡ ಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಪದಾಧಿಕಾರಿ ಗಳಾದ ಕರೀಂ ಕಡಂಗ, ಮೊಹಮ್ಮದ್ ರಾಫಿ, ಕೋಳುಮಂಡ ರಫೀಕ್, ಅಬ್ದುಲ್ ರಹಿಮಾನ್ (ಅಂದಾಯಿ) ಉಪಸ್ಥಿತರಿದ್ದರು.