ಮಡಿಕೇರಿ, ಜ. ೧೮: ನಮ್ಮ ಪೂರ್ವಜರ ಗ್ರಾಮೀಣ ಜೀವನ ಶೈಲಿಯನ್ನು ಮರೆಯಬಾರದು. ಹೊಸತು ಬಂದಾಗ ಹಳೆಯದನ್ನ ಬಿಡಬಾರದು. ಗ್ರಾಮ ಜೀವನವನ್ನು ಬಲಪಡಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಎ.ಎಸ್.ಪೊನ್ನಣ್ಣ ಅಭಿಮತ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ, ಭಾಗಮಂಡಲ ಮತ್ತು ಅಯ್ಯಂಗೇರಿ ಗ್ರಾಮಗಳನ್ನೊಳಗೊಂಡ ಗ್ರಾಮಸಿರಿ ಸಮಿತಿ ಸಹಯೋಗದೊಂದಿಗೆ ಸುವರ್ಣ ಕರ್ನಾಟಕ ೫೦ ರ ಸಂಭ್ರಮ ಪ್ರಯುಕ್ತ ಚೆಟ್ಟಿಮಾನಿ ಶಾಲಾ ಮೈದಾನದ ಸ್ವಾತಂತ್ರö್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸಭಾಮಂಟಪದ ಮೇಜರ್ ಮಂಗೇರಿರ ವಿನೋದ್ ಮುತ್ತಣ್ಣ ಮುಖ್ಯ ವೇದಿಕೆಯಲ್ಲಿ ನಡೆದ ಗ್ರಾಮಸಿರಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಇತಿಹಾಸದೊಂದಿಗೆ ನಾಡಿನ ಪರಂಪರೆ, ಕಲೆ, ಸಂಸ್ಕೃತಿ, ಭಾಷೆ, ಜಾನಪದವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು, ಆಗ ಮಾತ್ರ ನಮಗೂ ಉಳಿಗಾಲ. ಗ್ರಾಮೀಣ ಪ್ರದೇಶ ಅಭಿವೃದ್ಧಿ ಹೊಂದಿದಲ್ಲಿ ರಾಷ್ಟçದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಕೃಷಿ, ಗುಡಿ ಕೈಗಾರಿಕೆಗಳು ಮತ್ತಷ್ಟು ಬಲವರ್ಧನೆಗೊಳ್ಳಬೇಕು, ಜಾತಿ, ಧರ್ಮ, ಭಾಷೆಯನ್ನು ಮೀರಿ ಎಲ್ಲರೂ ಒಂದೆಡೆ ಸೇರಿ ಗ್ರಾಮಸಿರಿ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಚಾರವಾಗಿದೆ. ಎಲ್ಲರೂ ಒಟ್ಟುಗೂಡುವುದೇ ಭಾರತ ದೇಶದ ಪ್ರತೀಕವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವುದೇ ಭಾರತದ ವೈಶಿಷ್ಟö್ಯವಾಗಿದೆ ಎಂದು ಹೇಳಿದರು.
(ಮೊದಲ ಪುಟದಿಂದ) ಭಾಗಮಂಡಲ ಭಾಗದಲ್ಲಿ ಕೊಡವ, ಅರೆಭಾಷೆ ಸೇರಿದಂತೆ ಹಲವು ಭಾಷೆಗಳನ್ನು ಮಾತನಾಡುವವರು ಇದ್ದಾರೆ. ಮಾತೃಭಾಷೆ ಜೊತೆಗೆ ನಾಡಿನ ಭಾಷೆ ಕನ್ನಡಕ್ಕೆ ಪ್ರಥಮ ಆದ್ಯತೆ ನೀಡಬೇಕು. ಸಣ್ಣ ಸಣ್ಣ ಭಾಷೆ, ಜನಾಂಗ, ಸಮಾಜಗಳ ಆಚಾರ ವಿಚಾರಗಳನ್ನು ಉಳಿಸಿಕೊಂಡು, ಕನ್ನಡ ನಾಡಿನ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಭ್ರಾತೃತ್ವ ಮತ್ತು ಸಮಾನತೆಯಿಂದ ಬೆರೆತು ಅಭಿವೃದ್ಧಿಯತ್ತ ಮುಖ ಮಾಡಬೇಕಿದೆ ಎಂದರು.
ಒಬ್ಬರು ಮತ್ತೊಬ್ಬರ ಆಚಾರ ವಿಚಾರ ಹಾಗೂ ಸಂಪ್ರದಾಯ ಪರಂಪರೆಗಳನ್ನು ಗೌರವಿಸಿ, ಅವರವರ ನಂಬಿಕೆ, ಪರಂಪರೆ, ಉಡುಪು, ಆಹಾರ ಪದ್ಧತಿಗಳಿಗೆ ಸ್ವತಂತ್ರ ಅವಕಾಶ ನೀಡಬೇಕು, ಯಾವುದೇ ರೀತಿಯ ಹೇರಿಕೆ ಮಾಡಬಾರದು. ಯಾರಿಗೂ ತೊಂದರೆಯಾದರೂ ಅವರ ರಕ್ಷಣೆಗೆ ನಿಲ್ಲಬೇಕು, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಬದುಕು ನಡೆಸಿದರೆ ಸಾಮರಸ್ಯ, ಸೌಹಾರ್ದತೆಯ ಭಾರತ ಕಟ್ಟಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಿಸಿದರು. ಗ್ರಾಮಸಿರಿಯಂತಹ ಕಾರ್ಯಕ್ರಮಗಳು ಎಲ್ಲೆಡೆ ಜರುಗುವಂತಾಗಬೇಕು. ಈ ಭಾಗದ ಅಭಿವೃದ್ಧಿಗೆ ಸಂಬAಧಿಸಿದAತೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮೀಣ ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ ಹೀಗೆ ವಿವಿಧ ಚಟುವಟಿಕೆಗಳಲ್ಲಿ ಎಲ್ಲರೂ ತೊಡಗಿಸಿಕೊಳ್ಳಲು ಗ್ರಾಮಸಿರಿ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.
ಅನಾದಿಕಾಲದಿಂದಲೂ ವಾಸ ಮಾಡಿಕೊಂಡು ಬಂದಿರುವ ಇಲ್ಲಿಯ ಜನರು ಭೂಮಿ ಮಾರಾಟ ಮಾಡಿಕೊಳ್ಳಬಾರದು. ಕೃಷಿ ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕು. ಗ್ರಾಮ ಗ್ರಾಮಗಳಲ್ಲಿ ಗ್ರಾಮಸಿರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಜಾನಪದ ಕಲೆ, ಗ್ರಾಮೀಣ ಕ್ರೀಡಾಕೂಟ, ಹೀಗೆ ಹಲವು ಕಲೆ, ಸಾಹಿತ್ಯ ಸಂಸ್ಕೃತಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಗ್ರಾಮಸಿರಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸರಕಾರದ, ಪರಿಷತ್ತಿನ ಯಾವದೇ ಅನುದಾನವಿಲ್ಲದೆ, ಗ್ರಾಮಸ್ಥರ ಕಿರು ಕಾಣಿಕೆಯ ಸಂಗ್ರಹದೊAದಿಗೆ ನಡೆಸಲಾಗಿದೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮಾತನಾಡಿ ಸುವರ್ಣ ಕರ್ನಾಟಕ ಸಂಭ್ರಮದ ಸಂದರ್ಭದಲ್ಲಿ ೫ ತಾಲೂಕಿನಲ್ಲಿ ಗ್ರಾಮಸಿರಿ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಪ್ರಥಮ ಗ್ರಾಮಸಿರಿ ಕಾರ್ಯಕ್ರಮವನ್ನು ಚೆಟ್ಟಿಮಾನಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ, ಕೊಡಗು ಜಿಲ್ಲೆಯ ಗ್ರಾಮೀಣ ಜನರು ಉದ್ಯೋಗ ಅರಸಿ ದೊಡ್ಡ ದೊಡ್ಡ ನಗರ ಸೇರುತ್ತಿದ್ದಾರೆ. ಉದ್ಯೋಗ ಅರಸಿ ನಗರ ಪಟ್ಟಣಗಳಿಗೆ ತೆರಳಿದರೂ ಸಹ ವಾಪಸ್ಸು ಗ್ರಾಮೀಣ ಪ್ರದೇಶಕ್ಕೆ ಬರುವಂತಾಗಬೇಕು. ವೃತ್ತಿಗಾಗಿ ವಲಸೆ ಹೋಗುವುದು ತಪ್ಪಲ್ಲ. ಆದರೆ ಹುಟ್ಟಿ ಬೆಳೆದ ಊರನ್ನು ಯಾರೂ ಸಹ ಮರೆಯಬಾರದು. ಆ ನಿಟ್ಟಿನಲ್ಲಿ ಗ್ರಾಮಸಿರಿ ಬೆಳಗಬೇಕು ಎಂದರು.
ಭಾಗಮಂಡಲ ಹೋಬಳಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎ.ಎಸ್. ಶ್ರಿಧರ್ ಸಂಪಾದಕತ್ವದಲ್ಲಿ ಹೊರತರಲಾಗಿರುವ ಗ್ರಾಮಸಿರಿ ಕಿರುಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಜಾನಪದ ಪರಿಷತ್ತು ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ ಅವರು ಪಟ್ಟಣದಲ್ಲಿ ವಾಸಿಸುತ್ತಿರುವವರು ಹೃದಯಶೂನ್ಯರಾಗಿದ್ದಾರೆ, ಪ್ರೀತಿ, ಸಂಬAಧಗಳು ಬೇಕಿಲ್ಲ, ಸಹಾಯ ಮಾಡುವ ಮನೋಭಾವವಿಲ್ಲ, ಇದು ದೂರಾಗಬೇಕು. ಹೃದಯದಿಂದ ಮಾತನಾಡಿದರೆ ಪ್ರಾಣಿ, ಪಕ್ಷಿಗಳಿಗೂ ಅರ್ಥವಾಗುತ್ತದೆ ಎಂದು ಉದಾಹರಣೆ ಸಹಿತ ಹೇಳಿದರು. ಜಾನಪದಿಯರು ಹೃದಯದ ಮಾತು ಆಡುತ್ತಾರೆ. ಆದರೀಗ ಜಾನಪದ ವಿದ್ಯೆ ನಶಿಸಿ ಹೋಗುತ್ತಿದೆ, ಜಾನಪದ ಕಲೆ, ಸಂಸ್ಕೃತಿಯನ್ನು ಉಳಿಸಬೇಕು. ಪರಸ್ಪರ ಉತ್ತಮ ಜೀವನ ನಡೆಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ಮಾತನಾಡಿ ಬಹುಸಂಸ್ಕೃತಿ, ಬಹುಕಲೆ, ಬಹುಭಾಷೆ ಒಳಗೊಂಡಿರುವ ನಾಡಿನಲ್ಲಿ ಜನಪದದ ಬುದ್ಧಿಮಾತು ನೆನಪಿಸಿಕೊಂಡು ಜಾತಿ, ಧರ್ಮ, ದ್ವೇಷ ಬಿಟ್ಟು ಎಲ್ಲರೂ ಸಮಾನತೆಯಿಂದ ಬದುಕಿದಾಗ ಭವ್ಯಭಾರತ ಕಟ್ಟಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಗ್ರಾಮಸಿರಿಯ ಸ್ವಾಗತ ಸಮಿತಿ ಅಧ್ಯಕ್ಷ ಪಾಣತ್ತಲೆ ಪಿ. ವಿಶ್ವನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಒಂದೂವರೆ ತಿಂಗಳ ಶ್ರಮ ಸಫಲತೆ ಕಂಡಿದೆ. ರಾಜಕೀಯ ರಹಿತ, ಜಾತ್ಯತೀತ ನಿಲುವಿನ ಕೊಡುಗೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕುಂದಚೇರಿ ಗ್ರಾ.ಪಂ.ಅಧ್ಯಕ್ಷ ಪೊಡನೊಳನ ಬಿ. ದಿನೇಶ್, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷ ಕಾಳನ ರವಿ, ಅಯ್ಯಂಗೇರಿ ಗ್ರಾ.ಪಂ. ಅಧ್ಯಕ್ಷ ಎಚ್.ಪುಷ್ಪ, ಕರಿಕೆ ಗ್ರಾ.ಪಂ.ಅಧ್ಯಕ್ಷ ಬಾಲಚಂದ್ರ ನಾಯರ್, ಕಸಾಪ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಕಸಾಪ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಮಡಿಕೇರಿ ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಅಂಬೆಕಲ್ಲು ನವೀನ್, ಕಸಾಪ ಭಾಗಮಂಡಲ ಹೋಬಳಿ ಘಟಕದ ಅಧ್ಯಕ್ಷ ಸುನಿಲ್ ಪತ್ರಾವೊ ಇತರರು ಇದ್ದರು.
ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಜ್ಞಾನೋದಯ ಶಾಲಾ ಶಿಕ್ಷಕಿಯರು ಉದ್ಘಾಟನಾ ಗೀತೆ ಹಾಡಿದರು. ಭಾಗಮಂಡಲ ವಿಎಸ್ಎಸ್ಎನ್ ಉಪಾಧ್ಯಕ್ಷ ಜೆ.ಎನ್. ನಂಜುAಡಪ್ಪ ಸ್ವಾಗತಿಸಿದರೆ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಅಧ್ಯಾಪಕ ಡಿ.ಪಿ. ಸತೀಶ್ ಮತ್ತು ಭಾಗಮಂಡಲ ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕಿ ಎಂ.ಜಿ. ರೂಪ ನಿರೂಪಿಸಿದರು. ಕುಂದಚೇರಿ ಗ್ರಾ.ಪಂ. ಪಿಡಿಒ ಹೆಚ್. ಯಾದವ್ ವಂದಿಸಿದರು.