ಸೋಮವಾರಪೇಟೆ, ಜ. ೧೭: ಸಮೀಪದ ಶಾಂತಳ್ಳಿ ಶ್ರೀಕುಮಾರ ಲಿಂಗೇಶ್ವರ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆಬಿದ್ದಿತು. ಕಳೆದ ಒಂದು ವಾರಗಳ ಕಾಲ ಹಲವು ಪೂಜಾ ಕೈಂಕರ್ಯಗಳೊAದಿಗೆ ನೆರವೇರಿದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭ ಇಂದು ನಡೆಯಿತು.

ಪ್ರಸಾದ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ರಾಷ್ಟçದ ಪ್ರಗತಿಯಲ್ಲಿ ಯುವಕರ ಪಾತ್ರ ಅಪಾರವಾದದು. ಯುವಶಕ್ತಿ ರಾಷ್ಟçಕ್ಕೆ ಮತ್ತು ಸಮಾಜಕ್ಕೆ ಅತ್ಯಮೂಲ್ಯ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜಾತಿ, ವರ್ಗ, ಲಿಂಗಭೇದ ಮರೆತು ಇಡೀ ಸಮಾಜ ಒಂದಾಗಿ ಕೆಲಸ ಮಾಡಬೇಕು ಎಂದರು.

ವಾರಗಳ ಕಾಲ ನಡೆದ ಶಾಂತಳ್ಳಿ ಕುಮಾರಲಿಂಗೇಶ್ವರ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ರಾಜಕೀಯ ರಹಿತವಾಗಿ ಪ್ರತಿಯೊಬ್ಬರು ಪಾಲ್ಗೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಂ.ಲೋಕೇಶ್ ಮಾತನಾಡಿ, ನೂರಾರು ವರ್ಷಗಳ ಇತಿಹಾಸವಿರುವ ಮತ್ತು ಚೋಳರ ಕಾಲದಲ್ಲಿ ನಿರ್ಮಾಣಗೊಂಡಿರುವ ಶಾಂತಳ್ಳಿಯ ಕುಮಾರಲಿಂಗೇಶ್ವರ ದೇವಾಲಯದ ಜಾತ್ರಾಮಹೋತ್ಸವವನ್ನು ಮುಂದಿನ ದಿನಗಳಲ್ಲಿ ಕೊಡಗಿನಲ್ಲಿಯೇ ಪ್ರಖ್ಯಾತ ಮಾಡುವ ಉದ್ದೇಶವಿದೆ. ಈಗಾಗಲೇ ದೇವಾಲಯದ ವತಿಯಿಂದ ರೂ.೬೦ ಲಕ್ಷ ವೆಚ್ಚದಲ್ಲಿ ಕಲ್ಯಾಣ ಭವನವನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಜೂನ್ ಅಂತ್ಯದೊಳಗೆ ಲೋಕಾರ್ಪಣೆ ಮಾಡುವುದಾಗಿ ಹೇಳಿದರು. ಈ ಸಂದರ್ಭ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕೆಎಸ್‌ಆರ್‌ಟಸಿ ಡಿಸಿಎಂ ಕೆ.ಎಂ.ರವೀAದ್ರ, ಬೆಟ್ಟದಳ್ಳಿಯ ಬಿ.ಬಿ. ನವೀನ್, ತಲ್ತರೆಶೆಟ್ಟಳ್ಳಿಯ ಮಾಜಿ ಸೈನಿಕ ಅಶೋಕ, ಅನನ್ಯ ಮತ್ತು ೩೫ ವರ್ಷಗಳ ಮೇಲ್ಪಟ್ಟ ರಾಷ್ಟçಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಗಿರಿಜ ಅವರುಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಬೇಕಾಗಿದ್ದ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬದಾಮಿಯವರು ಇತ್ತೀಚೆಗಷ್ಟೇ ಹೃದಯಾಘಾತದಿಂದ ಅಕಾಲಿಕ ಮರಣಹೊಂದಿದ ಹಿನ್ನೆಲೆಯಲ್ಲಿ ಸಮಾರಂಭದಲ್ಲಿ ಸಂತಾಪ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ದೇವಾಲಯ ಧರ್ಮದರ್ಶಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್.ರಾಮಚಂದ್ರ, ಪ್ರಮುಖರಾದ ಕೆ.ಕೆ.ಸುಬ್ಬಯ್ಯ, ಕೆ.ಕೆ.ಗೋಪಾಲ, ಬಿ.ಈ.ಜಯೇಂದ್ರ, ಸವಿತ ವಿಜಯ, ಬೆಟ್ಟದಳ್ಳಿ ಗ್ರಾಪಂ ಅಧ್ಯಕ್ಷ ಕೆ.ಜಿ.ತಮ್ಮಯ್ಯ, ಕೆ.ಎಂ.ಧರ್ಮಪ್ಪ, ಕುಮಾರಲಿಂಗೇಶ್ವರ ಯುವಕ ಸಂಘದ ಅಧ್ಯಕ್ಷ ಜಿ.ಎಂ.ಸಜನ್, ದೇವಾಲಯ ಸಮಿತಿ ಕಾರ್ಯದರ್ಶಿ ಕೆ.ಕೆ.ಮುತ್ತಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.