ಮುಳ್ಳೂರು, ಜ. ೧೭: ಸಮೀಪದ ಆಲೂರುಸಿದ್ದಾಪುರ ಸಾಯಿ ಎಜುಕೇಷನ್ ಟ್ರಸ್ಟ್ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ಶಾಲೆಯ ೧೮ನೇ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ತಾ.೧೮ ರಂದು (ಇಂದು) ಅಂತರ್‌ಶಾಲಾ ಮಟ್ಟದ ವಿದ್ಯಾರ್ಥಿಗಳ ಲಗೋರಿ ಕ್ರೀಡಾಕೂಟವನ್ನು ಶಾಲೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಾಯಿ ಎಜುಕೇಷನ್ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟಿ ಎಚ್.ಕೆ. ಶಿವಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ ೧೦ ಗಂಟೆಯಿAದ ಲಗೋರಿ ಆಟದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಕ್ರೀಡಾಕೂಟವನ್ನು ಸೈನಿಕ ವೈ.ಜೆ. ರೂಪೇಶ್ ಉದ್ಘಾಟಿಸಲಿದ್ದಾರೆ. ಸಾಯಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಟಿ.ಪಿ. ಜೀವನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾ.೧೯ ರಂದು ಶಾಲೆಯ ವಾರ್ಷಿಕೋತ್ಸವ ನಡೆಯಲಿದ್ದು ಈ ಪ್ರಯುಕ್ತ ಬೆಳಿಗ್ಗೆ ೧೦ ಗಂಟೆಯಿAದ ಪೋಷಕರಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಸಾಯಿ ಎಜುಕೇಷನ್ ಟ್ರಸ್ಟ್ನ ನಿರ್ದೇಶಕ ಮಂಜುನಾಥ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು ಆಲೂರುಸಿದ್ದಾಪುರ ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಉದಯಕುಮಾರ್ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಸಾಯಿ ಎಜುಕೇಷನ್ ಟ್ರಸ್ಟ್ನ ಮ್ಯಾನೆಜಿಂಗ್ ಟ್ರಸ್ಟಿ ಎಚ್.ಕೆ. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಕುಶಾಲನಗರ ಸರಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ನಾಗೇಶ್, ಕೊಡಗು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಝರು ಗಣಪತಿ, ಕರ್ನಾಟಕ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ಅಧ್ಯಕ್ಷೆ ಡಿ.ಸುಜಲಾದೇವಿ ಭಾಗವಹಿಸಲಿದ್ದಾರೆ. ಮೈಸೂರು ಡಯಟ್ ಸಂಸ್ಥೆಯ ಉಪನ್ಯಾಸಕ ಕೆ.ವಿ. ಸುರೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ.