ಸೋಮವಾರಪೇಟೆ, ಜ. ೧೭: ಸಮೀಪದ ಗಣಗೂರು ಗ್ರಾಮದಲ್ಲಿ ಕಾಡುಹಂದಿಗಳ ಕಾಟ ಮಿತಿ ಮೀರಿದ್ದು, ಕೃಷಿ ಫಸಲನ್ನು ನಷ್ಟಗೊಳಿಸುತ್ತಿವೆ.
ಕಳೆದ ಕೆಲ ಸಮಯ ಗಳಿಂದ ಈ ಭಾಗದಲ್ಲಿ ಬೀಡುಬಿಟ್ಟಿರುವ ಕಾಡು ಹಂದಿಗಳ ಹಿಂಡು, ಕೃಷಿ ಪ್ರದೇಶಕ್ಕೆ ಲಗ್ಗೆಯಿಡುತ್ತಿದ್ದು, ಫಸಲನ್ನು ನಷ್ಟಗೊಳಿಸುವ ಮೂಲಕ ಕೃಷಿಕರಿಗೆ ಸಂಕಷ್ಟ ತಂದೊಡ್ಡುತ್ತಿವೆ.
ಗ್ರಾಮದ ಚಂದ್ರಶೇಖರ್ ಹಾಗೂ ಸೋಮಶೇಖರ್ ಅವರುಗಳಿಗೆ ಸೇರಿದ ತೋಟಕ್ಕೆ ನುಗ್ಗಿರುವ ಕಾಡುಹಂದಿಗಳು ೩೦ಕ್ಕೂ ಅಧಿಕ ಅಡಿಕೆ ಗಿಡಗಳನ್ನು ನಷ್ಟಗೊಳಿಸಿವೆ. ಅರಣ್ಯ ಇಲಾಖೆ ತಕ್ಷಣ ಪರಿಹಾರ ಒದಗಿಸಬೇಕು. ವನ್ಯಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಚಂದ್ರಶೇಖರ್ ಒತ್ತಾಯಿಸಿದ್ದಾರೆ.