ಭಾಗಮಂಡಲ, ಜ. ೧೯: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ ಮಡಿಕೇರಿ ವತಿಯಿಂದ ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಮಟ್ಟದ ಆಯುಷ್ಮಾನ್ಭವ ಕಾರ್ಯಕ್ರಮದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಭಾಗಮಂಡಲದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಡೆದ ಶಿಬಿರವನ್ನು ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ ಉದ್ಘಾಟಿಸಿದರು.
ಶಿಬಿರದಲ್ಲಿ ೧೨೦ ರೋಗಿಗಳು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡರು. ವಿವಿಧ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಗೆ ಕಳುಹಿಸಲಾಯಿತು.
ಶಿಬಿರದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆ, ಉಚಿತ ಆಯುಷ್ಮಾನ್ ಕಾರ್ಡುಗಳ ನೋಂದಣಿ , ಉಚಿತ ವಿಕಲಚೇತನ ಕಾರ್ಡುಗಳ ನೋಂದಣಿ ಮಾಡಿಸಲಾಯಿತು.
ದೇಹ ದಾನ, ರಕ್ತದಾನ, ಅಂಗಾAಗಗಳ ದಾನÀ ಹಾಗೂ ಇನ್ನಿತರ ಯೋಜನೆಗಳ ಕುರಿತು ಜಿಲ್ಲಾ ಶಸ್ತç ಚಿಕಿತ್ಸಕ ಡಾ. ನಂಜುAಡಯ್ಯ ಮಾಹಿತಿ ನೀಡಿದರು. ಸಾಮಾನ್ಯ ವೈದ್ಯಶಾಸ್ತç ವಿಭಾಗದ ಮುಖ್ಯಸ್ಥ ಲೋಕೇಶ್, ನೋಡಲ್ ಅಧಿಕಾರಿ ಡಾ. ರಾಮಚಂದ್ರ ಕಾಮತ್, ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕುಶ್ವಂತ್, ತಜ್ಞ ವೈದ್ಯರಾದ ಶ್ರೀದೇವಿ, ಡಾ. ಸತ್ಯಕಿ, ಡಾ. ರಾಕೇಶ್, ಡಾ. ನಿರಂಜನ, ಡಾ. ಚಿತ್ರ, ಡಾ. ವಿಜಯಕುಮಾರ್ ಪಾಲ್ಗೊಂಡಿದ್ದರು. ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.