ಮಡಿಕೇರಿ, ಜ. ೧೯: ಜ್ಞಾನ ಸಂಪಾದನೆ ಮತ್ತು ಸಂಸ್ಕೃತಿಯ ಉಳಿವಿಗೆ ಪುಸ್ತಕ ಓದುವ ಹಾಗೂ ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳ ಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ ೮೧ನೇ ಪುಸ್ತಕ ಹಾಗೂ ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಬರೆದಿರುವ ೬ನೇ ಪುಸ್ತಕ "ಪೂ ಬಳ್ಳಿ"ಯನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡಿದರು.

ವಿಶಿಷ್ಟವಾಗಿರುವ ಕೊಡವ ಭಾಷೆಯ ಮೇಲಿನ ಅಭಿಮಾನದಿಂದ ಅನೇಕರು ಕೊಡವ ಪುಸ್ತಕವನ್ನು ಹೊರತರುತ್ತಿದ್ದಾರೆ. ಆ ಮೂಲಕ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಮಡಿಕೇರಿ, ಜ. ೧೯: ಜ್ಞಾನ ಸಂಪಾದನೆ ಮತ್ತು ಸಂಸ್ಕೃತಿಯ ಉಳಿವಿಗೆ ಪುಸ್ತಕ ಓದುವ ಹಾಗೂ ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳ ಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಕರೆ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ ೮೧ನೇ ಪುಸ್ತಕ ಹಾಗೂ ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಬರೆದಿರುವ ೬ನೇ ಪುಸ್ತಕ "ಪೂ ಬಳ್ಳಿ"ಯನ್ನು ಬಿಡುಗಡೆ ಗೊಳಿಸಿ ಅವರು ಮಾತನಾಡಿದರು.

ವಿಶಿಷ್ಟವಾಗಿರುವ ಕೊಡವ ಭಾಷೆಯ ಮೇಲಿನ ಅಭಿಮಾನದಿಂದ ಅನೇಕರು ಕೊಡವ ಪುಸ್ತಕವನ್ನು ಹೊರತರುತ್ತಿದ್ದಾರೆ. ಆ ಮೂಲಕ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಯನ್ನು ಬಿಟ್ಟು ಎಲ್ಲರಿಗೂ ಮೆಚ್ಚುಗೆ ಆಗುವ ರೀತಿಯಲ್ಲಿ ಬರೆಯುವುದೇ ಉತ್ತಮ ಸಾಹಿತ್ಯ ಎಂದರು.

ಎಲ್ಲರ ಜೀವನಕ್ಕೂ ಅನ್ವಯವಾಗುವ ರೀತಿಯ ಬರಹಗಳು ಹೆಚ್ಚು ಹೆಚ್ಚು ರಚನೆಯಾಗಬೇಕು. ವಿಸ್ತಾರವಾದ ವಿಚಾರವನ್ನು ಚುಟುಕಾಗಿ ಕವನದಲ್ಲಿ ವಿವರಿಸುವ ಪ್ರಯತ್ನವನ್ನು "ಪೂ ಬಳ್ಳಿ" ಪುಸ್ತಕದ ಲೇಖಕಿ ಫ್ಯಾನ್ಸಿ ಮುತ್ತಣ್ಣ ಮಾಡಿದ್ದಾರೆ. ಸಾಂಸಾರಿಕ ವಿಚಾರವನ್ನು ವಿನೋದವಾಗಿ ವಿವರಿಸಿದ್ದಾರೆ, ಇದು ಓದುಗರಿಗೆ ಸಂತೋಷವನ್ನು ನೀಡುತ್ತದೆ ಎಂದು ತಿಳಿಸಿದರು.

ಯಾವುದೇ ಲಾಭದ ನಿರೀಕ್ಷೆ ಗಳಿಲ್ಲದೆ ದಾಖಲೆಯ ೮೧ ಪುಸ್ತಕಗಳನ್ನು ಹೊರ ತರುವ ಮೂಲಕ ಸಾಹಿತ್ಯಾಭಿ ಮಾನವನ್ನು ಮೆರೆಯುತ್ತಿರುವ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನ ಸಿಗಲಿ ಎಂದು ಡಾಟಿ ಪೂವಯ್ಯ ಹೇಳಿದರು.

ಬರೆಯುವ ಹವ್ಯಾಸ ಹೊಂದಿರುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಪುಸ್ತಕಗಳನ್ನು ಹೊರ ತಂದು ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೂ ಅಯ್ಯಪ್ಪ ಕಾರಣಕರ್ತ ರಾಗುತ್ತಿದ್ದಾರೆ. ಸಾಹಿತ್ಯಕ್ಕಾಗಿ ದುಡಿಯುವವರಿಗೆ ಅಕಾಡೆಮಿಯಲ್ಲಿ ಸ್ಥಾನಮಾನ ಸಿಗಬೇಕು ಎಂದರು.

"ಪೂ ಬಳ್ಳಿ" ಪುಸ್ತಕದ ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಮಾತನಾಡಿ, ಬರಹಗಾರರನ್ನು ಪ್ರೋತ್ಸಾಹಿಸಿ, ಮುಖ್ಯವಾಹಿನಿಗೆ ತಂದಾಗ ಪ್ರತಿಭೆಗಳು ಅನಾವರಣ ಗೊಳ್ಳುತ್ತವೆ. ಇದು ಸಾಹಿತ್ಯದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಾಹಿತಿ ಐಚಂಡ ರಶ್ಮಿ ಮೇದಪ್ಪ ಮಾತನಾಡಿ, ಬರಹಗಾರರಿಗೆ ತಾವು ಬರೆದ ಬರಹ ಪುಸ್ತಕದ ರೂಪದಲ್ಲಿ ಹೊರಬರಬೇಕೆನ್ನುವುದು ಕನಸು ಗಳಿರುತ್ತದೆ. ಉತ್ಸಾಹಿ ಬರಹಗಾರರನ್ನು ಗುರುತಿಸಿ ಕೊಡವ ಮಕ್ಕಡ ಕೂಟ ಪ್ರೋತ್ಸಾಹಿಸುತ್ತಾ ಬಂದಿರುವುದರಿAದ ಕೊಡವ ಸಂಸ್ಕೃತಿ, ಆಚಾರ, ವಿಚಾರ, ಸಾಹಿತ್ಯದ ಬೆಳವಣಿಗೆಗೆ ಸಹಕಾರಿಯಾಗಿದೆ. ಮುಂದಿನ ದಿನಗಳಲ್ಲಿ ಸಾಹಿತ್ಯ ಲೋಕಕ್ಕೆ ಮತ್ತಷ್ಟು ಕೊಡುಗೆ ಸಿಗುವಂತಾಗಲಿ ಎಂದು ಹಾರೈಸಿದರು.

ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕೃತಿ, ಸಾಹಿತ್ಯ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿರುವ ಕೂಟ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಒಟ್ಟು ೮೦ ಕೃತಿಗಳನ್ನು ಬಿಡುಗಡೆ ಮಾಡಿದೆ. ಇದೀಗ ೮೧ನೇ ಪುಸ್ತಕ, ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರು ಬರೆದಿರುವ "ಪೂ ಬಳ್ಳಿ" ಕೊಡವ ಪುಸ್ತಕ ಬಿಡುಗಡೆಗೊಂಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಬರಹಗಾರರನ್ನು ಗುರುತಿಸಿ, ಪ್ರೋತ್ಸಾಹಿಸಲಾಗುವುದು ಎಂದರು.

ವ್ಯಾಲಿ ಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ಉಪಸ್ಥಿತರಿದ್ದರು.