ಮಡಿಕೇರಿ, ಜ. ೧೯: ಮಾಣಿ - ಮೈಸೂರು ರಾಷ್ಟಿçÃಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಮಡಿಕೇರಿ ಕಡೆಯಿಂದ ತೆರಳುತ್ತಿದ್ದ ಟ್ಯಾಂಕರ್ (ಕೆಎ೧೯-೮೦೯೪) ಮತ್ತು ಸುಳ್ಯ ಭಾಗದಿಂದ ಮಡಿಕೇರಿಗೆ ಬರುತ್ತಿದ್ದ ಬೈಕ್ (ಕೆಎ೧೨ ಈಹೆಚ್೨೯೪೬) ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ನಜ್ಜು ಗುಜ್ಜಾಗಿದೆ. ರವೀಂದ್ರ ಎಂಬವರ ಸ್ಥಿತಿ ಚಿಂತಾಜನಕವಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸ ಲಾಗಿದೆ. ಸುರೇಂದ್ರ ಎಂಬವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.