ಸುಂಟಿಕೊಪ್ಪ, ಜ. ೧೯: ಪಟ್ಟಣದಲ್ಲಿ ಯುವಕರ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ತಾ. ೧೪ರಂದು ರಾತ್ರಿ ೮ ಗಂಟೆ ಸುಮಾರಿಗೆ ಪಟ್ಟಣ ಮಧ್ಯಭಾಗದಲ್ಲಿರುವ ಮದ್ಯದ ಅಂಗಡಿ ಬಳಿ ಎರಡು ಗುಂಪಿನ ಯುವಕರು ಹೊಡೆದಾಡಿಕೊಂಡಿದ್ದಾರೆ. ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಘರ್ಷಣೆ ತಪ್ಪಿಸಿದ್ದಾರೆ. ಇಲ್ಲಿನ ಮಾರುಕಟ್ಟೆ ಆವರಣದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಾದಕ ಪದಾರ್ಥಗಳನ್ನು ಸೇವಿಸಿ ಹೊಡೆದಾಡುವುದು ಸರ್ವೆ ಸಾಮಾನ್ಯವಾಗಿದೆ. ಸುಂಟಿಕೊಪ್ಪದಲ್ಲಿ ಇಂತಹ ಪುಂಡಪೋಕರಿಗಳಿAದ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಪೊಲೀಸರು ಸೂಕ್ತ ಕ್ರಮಕೈಗೊಳ್ಳ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.