ಬೋಯಿಂಗ್ ಸೆಂಟರ್ ಉದ್ಘಾಟಿಸಿದ ಪ್ರಧಾನಿ ಮೋದಿ
ನವದೆಹಲಿ, ಜ. ೧೯: ಬೆಂಗಳೂರು ಆವಿಷ್ಕಾರ ಮತ್ತು ಸಾಧನೆಗಳೊಂದಿಗೆ ನಿರೀಕ್ಷೆಗಳನ್ನು ಸಂಪರ್ಕಿಸುವ ನಗರವಾಗಿದೆ. ಬೆಂಗಳೂರು ಭಾರತದ ತಾಂತ್ರಿಕ ಸಾಮರ್ಥ್ಯಗಳನ್ನು ಜಾಗತಿಕ ಪೂರೈಕೆಗಳಿಗೆ ಸಂಪರ್ಕಿಸುತ್ತದೆ. ಬೋಯಿಂಗ್ನ ಈ ಹೊಸ ಕ್ಯಾಂಪಸ್ ಬೆಂಗಳೂರಿನ ಗುರುತನ್ನು ಮತ್ತಷ್ಟು ಬಲಪಡಿಸುತ್ತದೆ. ಇದು ಅಮೆರಿಕದ ಹೊರಗೆ ಬೋಯಿಂಗ್ನ ಅತಿದೊಡ್ಡ ಕೇಂದ್ರವಾಗಿದೆ. ಈ ಕ್ಯಾಂಪಸ್ ಭಾರತದ ಪ್ರತಿಭೆಯ ಮೇಲಿನ ವಿಶ್ವ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬೋಯಿಂಗ್ ಇಂಡಿಯಾ ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ ಸೆಂಟರ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಮುಂದೊAದು ದಿನ ಭಾರತವೇ ಈ ಕೇಂದ್ರದಲ್ಲಿ ಭವಿಷ್ಯದ ವಿಮಾನಗಳನ್ನು ವಿನ್ಯಾಸಗೊಳಿಸಲಿದೆ. ಫೈಟರ್ ಪೈಲಟ್ಗಳಾಗಲಿ ಅಥವಾ ನಾಗರಿಕ ವಿಮಾನಯಾನವಾಗಲಿ ಇಂದು ಭಾರತ ಮಹಿಳಾ ಪೈಲಟ್ಗಳ ವಿಷಯದಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು. ಕಳೆದ ೧೦ ವರ್ಷಗಳಲ್ಲಿ ಭಾರತದ ವಿಮಾನಯಾನ ಮಾರುಕಟ್ಟೆ ಸಂಪೂರ್ಣ ಬದಲಾಗಿದೆ. ಇಂದು ಪ್ರತಿಯೊಬ್ಬ ವಾಯುಯಾನ ಪಾಲುದಾರರು ಹೊಸ ಶಕ್ತಿಯಿಂದ ತುಂಬಿದ್ದಾರೆ. ಭಾರತ ಇಂದು ವಿಶ್ವದ ಮೂರನೇ ಅತಿದೊಡ್ಡ ದೇಶೀಯ ವಿಮಾನಯಾನ ಮಾರುಕಟ್ಟೆಯಾಗಿದೆ ಎಂದರು. ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕದ ಸಾಧನೆಗೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ. ಕರ್ನಾಟಕವು ಭಾರತದಲ್ಲಿ ತಾಂತ್ರಿಕ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ, ಈ ರಾಜ್ಯವು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿದೆ. ಭಾರತದಲ್ಲಿ ನಾವೀನ್ಯತೆ ಸೂಚ್ಯಂಕದಲ್ಲಿ ಇದು ಮೊದಲ ಸ್ಥಾನದಲ್ಲಿದೆ. ಕರ್ನಾಟಕವು ಎಲ್ಲಾ ರಾಜ್ಯಗಳಿಗಿಂತ ಹೆಚ್ಚು ರಫ್ತು ಮಾಡುತ್ತದೆ ಎಂದರು.
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣ-ಅಪರಾಧಿಗಳು ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ, ಜ. ೧೯: ಶರಣಾಗತಿಗೆ ಕಾಲಾವಕಾಶ ಕೋರಿ ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಭಾನುವಾರದ ಒಳಗೆ ಶರಣಾಗುವಂತೆ ಸೂಚನೆ ನೀಡಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕುಟುಂಬದವರ ವಿವಾಹ, ಪೋಷಕರ ಜವಾಬ್ದಾರಿ ಕಾರಣ ನೀಡಿ ಸಲ್ಲಿಸಿರುವ ಅರ್ಜಿಗಳನ್ನು ಕೋರ್ಟ್ ಪರಿಗಣಿಸಿಲ್ಲ, ಪ್ರಕರಣದ ೧೧ ಅಪರಾಧಿಗಳು ಅಧಿಕಾರಿಗಳ ಮುಂದೆ ಶರಣಾಗುವಂತೆ ತಿಳಿಸಿದೆ. ತನ್ನ ಹಳೆಯ ಆದೇಶದ ಪ್ರಕಾರ, ಎಲ್ಲಾ ಆರೋಪಿಗಳು ಜನವರಿ ೨೧ ರೊಳಗೆ ಶರಣಾಗುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳು ತಮ್ಮ ಸ್ವಂತ ಆರೋಗ್ಯ ಮತ್ತು ತಮ್ಮ ವೃದ್ಧ ತಂದೆ ತಾಯಿ ಸೇರಿದಂತೆ ಹಲವು ಕೌಟುಂಬಿಕ ಜವಾಬ್ದಾರಿಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಉಲ್ಲೇಖಿಸಿದ್ದರು. ೨೦೦೨ ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಈ ಎಲ್ಲಾ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಈ ಪ್ರಕರಣದಲ್ಲಿ ಮರಣದಂಡನೆಗೆ ಒಳಗಾಗಿದ್ದ ೧೧ ಮಂದಿಯ ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಲಾಗಿತ್ತು. ಆದರೆ ಶಿಕ್ಷೆ ಅವಧಿ ಮುಗಿಯುವುದಕ್ಕೂ ಮುನ್ನವೇ ಗುಜರಾತ್ ಸರ್ಕಾರವು ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅವರನ್ನು ‘ಸನ್ನಡತೆ' ಆಧಾರದಲ್ಲಿ ಬಿಡುಗಡೆ ಮಾಡಿತ್ತು. ಈ ನಿರ್ಧಾರ ವ್ಯಾಪಕ ಆಕ್ರೋಶಕ್ಕೆ ಒಳಗಾಗಿತ್ತು. ಇದರ ವಿರುದ್ಧ ಬಿಲ್ಕಿಸ್ ಬಾನು ಮತ್ತೊಂದು ಸುತ್ತಿನ ಕಾನೂನು ಹೋರಾಟ ನಡೆಸಿದ್ದರು.
ನದಿಯಲ್ಲಿ ಮುಳುಗಿ ಮಾಲಾಧಾರಿಗಳು ಸಾವು
ನಂಜನಗೂಡು, ಜ. ೧೯: ಪಟ್ಟಣದ ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಜ್ಜೆಗೆ ಸೇತುವೆ ಬಳಿ ಮೂವರು ಕಪಿಲಾ ನದಿ ಪಾಲಾಗಿದ್ದಾರೆ. ಮೂವರು ಅಯ್ಯಪ್ಪ ಮಾಲಾಧಾರಿಗಳಾಗಿದ್ದು, ಸ್ನಾನಕ್ಕೆಂದು ನದಿಗೆ ಇಳಿದಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೃತರನ್ನು ತುಮಕೂರು ಮೂಲದ ಗವಿ ರಂಗ (೧೯), ರಾಕೇಶ್ (೧೯) ಹಾಗೂ ಅಪ್ಪು (೧೬) ಎಂದು ಗುರುತಿಸಲಾಗಿದೆ. ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶಾಸಕ ದರ್ಶನ್ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.