ಮಡಿಕೇರಿ, ಜ. ೧೯: ರಾಜಾಸೀಟ್ ಸಮೀಪವಿದ್ದ ಬೀದಿಬದಿ ಅಂಗಡಿಗಳ ತೆರವು ವಿರೋಧಿಸಿ ನಗರಸಭೆ ಎದುರು ವ್ಯಾಪಾರಿಗಳು ಕೈಗೊಂಡಿದ್ದ ಅಹೋರಾತ್ರಿ ಹೋರಾಟದ ಎರಡನೇ ದಿನದಂದು ಶಾಸಕ ಮಂಥರ್ ಗೌಡ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.
ಗುರುವಾರದಂದು ನಗರಸಭೆ ಅಧ್ಯಕ್ಷೆ, ಸದಸ್ಯರು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅಂಗಡಿಗಳನ್ನು ತೆರವುಗೊಳಿಸಿ ದ್ದರು. ನಂತರ ಇದನ್ನು ವಿರೋಧಿಸಿ ವ್ಯಾಪಾರಿಗಳು ರಾತ್ರಿಯಿಂದಲೇ ಪ್ರತಿಭಟನೆಗೆ ಮುಂದಾಗಿದ್ದರು.
ಪ್ರತಿಭಟನೆ ಮುಂದುವರೆಸಿ ಘೋಷಣೆ ಕೂಗಿ ವ್ಯಾಪಾರಿಗಳು ನ್ಯಾಯಕ್ಕಾಗಿ ಆಗ್ರಹಿಸಿದ್ದರು. ಗುರುತಿಸಿರುವ ೩ ಜಾಗಗಳು ಅವೈಜ್ಞಾನಿಕವಾಗಿದ್ದು, ಅಲ್ಲಿಗೆ ಸ್ಥಳಾಂತರವಾಗುವುದಕ್ಕೆ ಒಪ್ಪಿಗೆ ಇಲ್ಲ ಎಂದು ಬಿಗಿಪಟ್ಟು ಹಿಡಿದಿದ್ದರು. ಶಾಸಕರು ಆಗಮಿಸಿ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಬೇಡಿಕೆಯೊಡ್ಡಿದ ಪ್ರತಿಭಟನಾ ನಿರತರು ನ್ಯಾಯ ದೊರಕುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದರು.
ಇಂದು ಸ್ಥಳಕ್ಕಾಗಮಿಸಿದ ಶಾಸಕ ಮಂಥರ್ ಗೌಡ, ಪ್ರತಿಭಟನಾನಿರತರೊಂದಿಗೆ ಮಾತನಾಡಿ ಮಡಿಕೇರಿ, ಜ. ೧೯: ರಾಜಾಸೀಟ್ ಸಮೀಪವಿದ್ದ ಬೀದಿಬದಿ ಅಂಗಡಿಗಳ ತೆರವು ವಿರೋಧಿಸಿ ನಗರಸಭೆ ಎದುರು ವ್ಯಾಪಾರಿಗಳು ಕೈಗೊಂಡಿದ್ದ ಅಹೋರಾತ್ರಿ ಹೋರಾಟದ ಎರಡನೇ ದಿನದಂದು ಶಾಸಕ ಮಂಥರ್ ಗೌಡ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಅಂತ್ಯಗೊಳಿಸಿದ್ದಾರೆ.
ಗುರುವಾರದಂದು ನಗರಸಭೆ ಅಧ್ಯಕ್ಷೆ, ಸದಸ್ಯರು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅಂಗಡಿಗಳನ್ನು ತೆರವುಗೊಳಿಸಿ ದ್ದರು. ನಂತರ ಇದನ್ನು ವಿರೋಧಿಸಿ ವ್ಯಾಪಾರಿಗಳು ರಾತ್ರಿಯಿಂದಲೇ ಪ್ರತಿಭಟನೆಗೆ ಮುಂದಾಗಿದ್ದರು.
ಪ್ರತಿಭಟನೆ ಮುಂದುವರೆಸಿ ಘೋಷಣೆ ಕೂಗಿ ವ್ಯಾಪಾರಿಗಳು ನ್ಯಾಯಕ್ಕಾಗಿ ಆಗ್ರಹಿಸಿದ್ದರು. ಗುರುತಿಸಿರುವ ೩ ಜಾಗಗಳು ಅವೈಜ್ಞಾನಿಕವಾಗಿದ್ದು, ಅಲ್ಲಿಗೆ ಸ್ಥಳಾಂತರವಾಗುವುದಕ್ಕೆ ಒಪ್ಪಿಗೆ ಇಲ್ಲ ಎಂದು ಬಿಗಿಪಟ್ಟು ಹಿಡಿದಿದ್ದರು. ಶಾಸಕರು ಆಗಮಿಸಿ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಬೇಡಿಕೆಯೊಡ್ಡಿದ ಪ್ರತಿಭಟನಾ ನಿರತರು ನ್ಯಾಯ ದೊರಕುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದರು.
ಇಂದು ಸ್ಥಳಕ್ಕಾಗಮಿಸಿದ ಶಾಸಕ ಮಂಥರ್ ಗೌಡ, ಪ್ರತಿಭಟನಾನಿರತರೊಂದಿಗೆ ಮಾತನಾಡಿ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದರು. ಆ ವೇಳೆ ಆದ ಗಲಾಟೆಯ ಪರಿಣಾಮ ಅಲ್ಲಿಂದ ಅಂದಿನ ಜಿಲ್ಲಾಧಿಕಾರಿ ಅಂಗಡಿ ತೆರವುಗೊಳಿಸಿದ್ದರು. ನಂತರ ರಾಜಾಸೀಟ್ ಆವರಣದ ರಸ್ತೆಬದಿಯಲ್ಲಿ ವ್ಯಾಪಾರಕ್ಕೆ ಮುಂದಾದರು. ಇದರಿಂದ ರಸ್ತೆ ಸಂಚಾರ, ಪಾದಾಚಾರಿಗಳ ಓಡಾಟಕ್ಕೆ ಸಮಸ್ಯೆಯಾದ ಕಾರಣ ಪರ್ಯಾಯ ಜಾಗ ಗುರುತಿಸಿ ಸ್ಥಳಾಂತರಕ್ಕೆ ಪ್ರಸ್ತಾವನೆ ಬಂದಿತ್ತು. ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನ ವ್ಯಾಪಾರಿಗಳಿಂದ ಬರುತ್ತಿರಲಿಲ್ಲ. ಸ್ಥಳಕ್ಕೆ ತೆರಳಿದ ನಗರಸಭೆ ಅಧಿಕಾರಿಗಳಿಗೆ ಅವಾಚ್ಯ ಶಬ್ದ ನಿಂದನೆಯನ್ನು ವ್ಯಾಪಾರಿಗಳು ಮಾಡಿದ್ದಾರೆ. ಮಡಿಕೇರಿ ಸಂಚಾರಿ ಠಾಣೆಯಿಂದಲೂ ತೆರವಿಗೆ ಪ್ರಸ್ತಾವನೆ ಬಂದಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆರವಿಗೆ ನಿರ್ಣಯ ಕೈಗೊಳ್ಳಲಾಗಿದೆ. ಸೂಕ್ತಕ್ರಮಕ್ಕೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದರು ಎಂದು ಮಾಹಿತಿ ನೀಡಿದ ಅವರು, ವ್ಯಾಪಾರಿಗಳಿಗೆ ನಗರಸಭೆ ಅನುದಾನಿಂದಲೇ ಸೌಲಭ್ಯ ಒದಗಿಸಿಕೊಡಲಾಗುವುದು ಎಂದು ಹೇಳಿದರು.
ಈ ಸಂದರ್ಭ ನಗರಸಭೆ ಸದಸ್ಯರುಗಳಾದ ಅಮೀನ್ ಮೊಹಿಸಿನ್, ಮನ್ಸೂರ್ ಅಲಿ, ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸುಲೇಮಾನ್ ಸೇರಿದಂತೆ ಇನ್ನಿತರರು ಹಾಜರಿದ್ದರು.