ಮಡಿಕೇರಿ, ಜ. ೧೯: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೋ. ಕೃಷ್ಣಪ್ಪ ಸ್ಥಾಪಿತ) ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ದಲಿತ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾಧ್ಯಕ್ಷ ಹೆಚ್.ಎಲ್ ದಿವಾಕರ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೨೫ ರಂದು ವೀರಾಜಪೇಟೆ ಸೆಂಟ್‌ಆ್ಯನ್ಸ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಅವರಿಗೆ ಕರ್ನಾಟಕ ದಲಿತ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥÀರ್ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ದಸಂಸ ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಸಂತೋಷ್ ಸಂಪಾಜೆ, ಮಡಿಕೇರಿ ನಗರ ಸಂಚಾಲಕ ಲೋಕನಾಥ್ ಇದ್ದರು.