ಪೊನ್ನAಪೇಟೆ, ಜ. ೨೦ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೋಣಿಕೊಪ್ಪದಲ್ಲಿ ಪ್ರಯಾಣಿಕರ ತಂಗುದಾಣ ನಿರ್ಮಾಣ ಕಾಮಗಾರಿಗೆ ತಾ.೨೫ ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಶಾಸಕ ಎ.ಎಸ್ ಪೊನ್ನಣ್ಣ ತಿಳಿಸಿದರು.

ವೀರಾಜಪೇಟೆ ನಿವಾಸದ ಕಚೇರಿಯಲ್ಲಿ ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಅವರು, ತಂಗುದಾಣ ನಿರ್ಮಾಣಕ್ಕೆ ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಹೇಳಿದಂತೆ ಎಲ್ಲಿಯೂ ಉದ್ದೇಶಿತ ಕಾಮಗಾರಿಗೆ ಹಣ ಬಿಡುಗಡೆಯಾಗಿರುವ ಬಗ್ಗೆ ಮತ್ತು ಆ ವಿಚಾರದ ಬಗ್ಗೆ ಪ್ರಸ್ತಾವನೆಗಳು ಸಲ್ಲಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸರಕಾರದ ಗಮನ ಸೆಳೆದು, ಅನುದಾನವನ್ನು ತರಲಾಗಿದೆ. ತಾ.೨೫ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗಿಗೆ ಆಗಮಿಸುತ್ತಿದ್ದು, ಅಂದೇ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಭ್ರಷ್ಟಾಚಾರ ನಿರ್ಮೂಲನೆಗೆ ನಾನು ಕಟ್ಟಿಬದ್ಧನಾಗಿ ನಿಂತಿದ್ದೇನೆ. ವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿಗಳನ್ನು ದಂಡಿಸುವ ಬದಲಾಗಿ ಸಾರ್ವಜನಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕಾಗಿದೆ. ಈ ಬಗ್ಗೆ ನಿರ್ದ್ಯಾಕ್ಷಿಣ್ಯ ಮನಸ್ಥಿತಿ ಹೊಂದಿದಾಗ ಮಾತ್ರ ವ್ಯವಸ್ಥೆಯು ಸರಿದೂಗಿಸಲು ಸಾಧ್ಯವಾಗಬಲ್ಲದು. ಈ ನಿಟ್ಟಿನಲ್ಲಿ ಒಬ್ಬ ಅಧಿಕಾರಿಯನ್ನು ದಂಡಿಸುವ ಬದಲು ನಾವು ವ್ಯವಸ್ಥೆಯನ್ನು ಬದಲಾಯಿಸಲು ಕ್ರಮ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ, ಜನರು ತಮ್ಮ ಕೆಲಸ ವಿಳಂಬವಾದರೂ ತೊಂದರೆ ಇಲ್ಲ,

ವ್ಯವಸ್ಥೆಯನ್ನು ಸರಿಪಡಿಸಲು ಅಧಿಕಾರಿಗಳನ್ನು ದಂಡಿಸುವ ಬದಲಾಗಿ ಸಾರ್ವಜನಿಕರು ತಮ್ಮ ಕೆಲಸ ಮಾಡಿಸಿಕೊಳ್ಳಲು ಲಂಚ ನೀಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕಾಗಿದೆ. ಈ ಬಗ್ಗೆ ನಿರ್ದ್ಯಾಕ್ಷಿಣ್ಯ ಮನಸ್ಥಿತಿ ಹೊಂದಿದಾಗ ಮಾತ್ರ ವ್ಯವಸ್ಥೆಯು ಸರಿದೂಗಿಸಲು ಸಾಧ್ಯವಾಗಬಲ್ಲದು. ಈ ನಿಟ್ಟಿನಲ್ಲಿ ಒಬ್ಬ ಅಧಿಕಾರಿಯನ್ನು ದಂಡಿಸುವ ಬದಲು ನಾವು ವ್ಯವಸ್ಥೆಯನ್ನು ಬದಲಾಯಿಸಲು ಕ್ರಮ ತೆಗೆದುಕೊಳ್ಳಬೇಕಾಗಿದೆ. ಹೀಗಾಗಿ, ಜನರು ತಮ್ಮ ಕೆಲಸ ವಿಳಂಬವಾದರೂ ತೊಂದರೆ ಇಲ್ಲ,

ಬಳಸುವುದಾಗಿ ಭರವಸೆ ನೀಡಿದರು.

ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಅಸಮಾಧಾನದ ಮಾತುಗಳು ಕೇಳಿ ಬರುತ್ತಿವೆ. ಆದರೆ, ರಸ್ತೆ ಗುಂಡಿ ಬಿದ್ದಿರುವುದು ಕಳೆದ ೨೦ ವರ್ಷಗಳಿಂದ ಆಡಳಿತ ನಡೆಸಿದ ವ್ಯವಸ್ಥೆಗೆ ಸಾಕ್ಷಿಯಾಗಿದೆ. ಶಾಸಕನಾದ ಕೆಲವೇ ಅವಧಿಯಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ಮತ್ತು ಉದ್ಘಾಟನೆಯನ್ನು ಕೂಡ ನೆರವೇರಿಸಲಾಗಿದೆ. ಗುಂಡಿ ಬಿದ್ದಿರುವ ರಸ್ತೆಗಳಿಗೆ ಮರುಡಾಂಬರೀಕರಣ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.

ಶಾಸಕನಾಗಿ ಅಲ್ಪಾವಧಿಯಷ್ಟೇ ಕಳೆದಿದೆ. ಆಡಳಿತ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಸಮಯಾವಕಾಶದ ಅವಶ್ಯಕತೆ ಇತ್ತು. ಅದರ ಅರಿವಾದ ನಂತರ ಜನರ ಸೇವಕನಾಗಿ ಮಾಡಬೇಕಾದ ಕೆಲಸವನ್ನ ನಿಭಾಯಿಸುವ ಸಾಮರ್ಥ್ಯ ಹೊಂದಿದ್ದೇನೆ ಎಂದು ಹೇಳಿದರು.

ಈ ಸಂದರ್ಭ ಕೊಡಗು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಕಾರ್ಯಧ್ಯಕ್ಷ ಬಿ.ಎಸ್ ಕಾರ್ಯಪ್ಪ, ಉಪಾಧ್ಯಕ್ಷ ಸಣ್ಣುವಂಡ ರತ್ನ ಸುಬ್ಬಯ್ಯ, ಗೌರವ ಸಲಹೆಗಾರ ಸಿ.ಎನ್ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಅರಮಣಮಾಡ ಎ. ಸತೀಶ್ ದೇವಯ್ಯ, ಜಂಟಿ ಕಾರ್ಯದರ್ಶಿ ಕೋಳೆರ ಸನ್ನು ಕಾವೇರಪ್ಪ, ಸಹ ಕಾರ್ಯದರ್ಶಿ ಕೋಳೆರ ರಾಜ ನರೇಂದ್ರ, ಸದಸ್ಯ ಪಾರುವಂಗಡ ದಿಲನ್ ಚಂಗಪ್ಪ ಇದ್ದರು.

-ಚನ್ನನಾಯಕ